ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಕೋವಿಡ್-೧೯ಗೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಕರೊನಾಗೆ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ31 ವರ್ಷದ ಯುವಕ ಕೂಡಾ ಸಾವನ್ನಪ್ಪಿದರು. ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಕರೊನಾ ದೃಢಪಟ್ಟಿದೆ. ಅವರು ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ.
ಖಾಸಗಿ ಆಸ್ಪತ್ರೆಯಲ್ಲಿ 51 ವರ್ಷದ ಗಂಡಸು ಡಯಾಬಿಟಿಸ್ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ನಗರದ ಬೆಂಗ್ರೆ ನಿವಾಸಿ ಮೃತಪಟ್ಟರು.