ಮಂಗಳೂರು ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ

Published on

ಮಂಗಳೂರು ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ

ಮಂಗಳೂರು: ಮಂಗಳೂರು ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಎಸ್‌ಡಿಎ ಅಧಿಕಾರಿಯೊಬ್ಬರನ್ನು ರೆಡ್‌ಹ್ಯಾಂಡ್‌ಆಗಿ ಮಂಗಳವಾರ ಬಂಧಿಸಿದ್ದಾರೆ.

ಎಸ್‌ಡಿಎ ಅಧಿಕಾರಿ ರಫೀಕ್ ಅಬ್ದುಲ್ (42) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಕಚೇರಿಯ ಕೆಲಸ‌‌ ಮಾಡಿಕೊಡಲು 40 ಸಾವಿರ ರೂ.‌ ಬೇಡಿಕೆ ಇಟ್ಟಿದ್ದ ಎಂಬ ಆರೋಪ ಈತನ ಮೇಲಿತ್ತು.

ಎಸಿಬಿ ಕಚೇರಿಯಲ್ಲಿ‌ ದೂರು ದಾಖಲಿಸಿದ್ದ ಸಂತ್ರಸ್ತರು, ಆರೋಪಿಗೆ ನಗದು ನೀಡುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ, ಸೊತ್ತನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net