ಮಂಗಳೂರು ಹೆಡ್ ಕಾನ್ ಸ್ಟೇಬಲ್ ಗೆ ಚೂರಿ ಇರಿತ

Published on

ಮಂಗಳೂರು: ನಗರದ ನ್ಯೂಚಿತ್ರಾ ಟಾಕೀಸ್ ಬಳಿ ಕರ್ತವ್ಯ ನಿರತ ಬಂದರು ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಅವರ ಕೈಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ನಗರದಲ್ಲಿ ಸರ ಕಳ್ಳತನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಹಾಕಲಾಗಿತ್ತು. ಅಲ್ಲಿ ಕರ್ತವ್ಯ ನಿರತರಾಗಿದ್ದಾಗ ನಡೆದುಕೊಂಡು ಬಂದ ದುಷ್ಕರ್ಮಿ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಬೈಕ್ ನಲ್ಲಿ ಬಂದು ದೂರದಲ್ಲಿ ನಿಲ್ಲಿಸಿ ಕೃತ್ಯ ಎಸಗಿ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಂದೋಬಸ್ತು ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net