ಮಂಡ್ಯದಲ್ಲಿ ಬಾಲಕಿ ಕೊಲೆಗೆ ತಾಳೆ ಬಸಾಪುರ ತಾಂಡದಲ್ಲಿ ಆಕ್ರೋಶ

IMG-20201204-WA0006.jpg
Published on

ಮರಿಯಮ್ಮನಹಳ್ಳಿ (ಬಳ್ಳಾರಿ):
ಪಾಲಕರೊಂದಿಗೆ ಗುಳೆ ಹೋಗಿದ್ದ ತಾಳೆ ಬಸಾಪುರ ತಾಂಡದ ಬಾಲಕಿ ಮೇಲೆ ಮಂಡ್ಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ. ಬಾಲಕಿಯ ಮೃತದೇಹವನ್ನು ತಾಳೆ ಬಸಾಪುರ ತಾಂಡಕ್ಕೆ ತರಲಾಗಿದ್ದು, ಶವ ಸಂಸ್ಕಾರ ನಡೆಸದೆ ಗ್ರಾಮಸ್ಥರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ತಡೆ ನಡೆಸಲು ಮುಂದಾಗಿದ್ದ ಗ್ರಾಮಸ್ಥರನ್ನು ಪೊಲೀಸರು ತಡೆದಿದ್ದಾರೆ. ಆದರೆ, ಬಳ್ಳಾರಿ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಗುಳೆ ಹೋದವರ ಮಕ್ಕಳ ಜೀವಕ್ಕೆ ಗ್ಯಾರಂಟಿ ಯಾರು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.
ಅಂತ್ಯಕ್ರಿಯೆ ನಡೆಸಿದ ಬಳಿಕ ಚರ್ಚಿಸುವ ಪೊಲೀಸರ ಭರವಸೆಗೆ ಗ್ರಾಮಸ್ಥರು ಮಣಿದಿಲ್ಲ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net