ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ

01ydg04
Published on


ಯಾದಗಿರಿ: ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಒದಗಿಸುವ ಜತೆಗೆ ಶಾಲೆಯಿಂದ ಡ್ರಾಪ್ಔಟ್ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಸಂಬಂಸಿದ ಅಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಸೂಚಿಸಿದರು.

ಮಂಗಳವಾರ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಹಾಜರಾತಿ ಪ್ರಮಾಣ ಹೆಚ್ಚಳವಾಗಬೇಕು. ಹಾಜರಾತಿ ನಿರ್ವಹಣೆಯ ಕಡ್ಡಾಯವಾಗಿರಬೇಕು. ಗುಣಾತ್ಮಕ ಶಿಕ್ಷಣ, ಬಿಸಿಯೂಟ ಯೋಜನೆಯಡಿ ಪೌಷ್ಟಿಕ ಆಹಾರ ಪೂರೈಕೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

ಸರಕಾರಿ ವಸತಿ ಶಾಲೆಗಳಲ್ಲಿ ವಿಶೇಷವಾಗಿ ಕುಡಿಯುವ ನೀರು, ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ , ಪೌಷ್ಟಿಕ ಆಹಾರ, ಗುಣಮಟ್ಟದ ದವಸ ಧಾನ್ಯ, ಹಾಜರಾತಿ ಸಮರ್ಪಕ ನಿರ್ವಹಣೆ, ಮಕ್ಕಳ ಆರೋಗ್ಯ ನಿರ್ವಹಣೆಗೆ ವಿಶೇಷ ಕಾಳಜಿ, ಮೆನು ಚಾಟರ್್ ಅನ್ವಯ ಉಪಹಾರ ವಿತರಣೆ, ಪರಿಸರ ಸುಚಿತ್ವ, ದೂರು ಪೆಟ್ಟಿಗೆಗಳ ಸ್ಥಾಪನೆ, ಪಾಲಕರ ಮತ್ತು ಮಕ್ಕಳ ಸಮಕ್ಷಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ತಾಕೀತು ಮಾಡಿದರು.

ಜಿಪಂ ಸಿಇಒ ಗರೀಮಾ ಪನ್ವಾರ್ ಮಾತನಾಡಿ, ಶಹಾಪುರ ತಾಲೂಕಿನ ಹಳಿಸಗರ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿಯರಿಗೆ ನೋಟಿಸ್ ಜಾರಿಗೊಳಿಸಲಾಗುವುದು, ಬಾಲ್ಯ ವಿವಾಹವಾಗಿ 18 ವರ್ಷದ ಒಳಗೆ ಗಭರ್ಿಣಿಯಾದ ಹೆಣ್ಣು ಮಕ್ಕಳು ಆಸ್ಪತ್ರೆಯಲ್ಲಿ ದಾಖಲಾದ ಬಗ್ಗೆ ಸೂಕ್ತ ದಾಖಲಾತಿಗಳ ಆಧಾರದ ಮೇಲೆ ಕಾನೂನಿನ ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದಶರ್ಿ ರವೀಂದ್ರ ಹೋನೊಲೆ, ಡಿವೈಎಸ್ಪಿ ಬಸವೇಶ್ವರ ಹೀರಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net