ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ಕ್ಷೇತ್ರ ಸಮನ್ವಯಾಧಿಕಾರಿ ಕೆ.ಸಂತೋಷ್ಕುಮಾರ್ ಅಭಿಪ್ರಾಯ
Published on:
Copied
Follow Us
ಹುಣಸೂರು : ಮಕ್ಕಳ ಪ್ರತಿಭೆಯನ್ನು ಗುರುತಿಸಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕೆ.ಸಂತೋಷ್ಕುಮಾರ್ ಅಭಿಪ್ರಾಯಪಟ್ಟರು.
ಮಂಗಳವಾರ ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಹಗರನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.
ಕೆಲವರಿಗೆ ಕಷ್ಟಸಾಧ್ಯವಾದದ್ದನ್ನು ಸುಲಭವಾಗಿ ಮಾಡುವುದೇ ಪ್ರತಿಭೆ. ವಿವಿಧ ಕ್ಷೇತ್ರಗಳಲ್ಲಿ ಇರುವ ಮಕ್ಕಳ ಪ್ರತಿಭೆಯನ್ನು ಇಂತಹ ವೇದಿಕೆ ಮೂಲಕ ಅನಾವರಣಗೊಳಿಸಬಹುದು. ಮಕ್ಕಳ ಮೊದಲ ಹಂತದ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ. ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಬೇಕು. ಕ್ಲಸ್ಟರ್ ಹಂತದಲ್ಲಿ ವಿಜೇತರಾದ ಪ್ರತಿಭೆಗಳಿಗೆ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಭಾಗವಹಿಸುವ ಅವಕಾಶವಿದ್ದು, ಇದರ ಸದುಪಯೋಗ ಪಡೆದು ಮಕ್ಕಳನ್ನು ವಿವಿಧ ಹಂತಗಳಲ್ಲಿ ಸ್ಪರ್ಧಿಸುವತ್ತ ಶಿಕ್ಷಕರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಮರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಾಕ್ಷ ವೆಂಕಟೇಶಾಚಾರಿ, ಎಸ್ಡಿಎಂಸಿ ಅಧ್ಯಕ್ಷ ಚಿಕ್ಕೇಗೌಡ, ಸಿಆರ್ಪಿ ಅನಿಲ್, ಹಗರನಹಳ್ಳಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗೇಶ್, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಮಾರುತಿ, ಮಂಜುನಾಥ್, ಮುಖ ಶಿಕ್ಷಕ ಸೋಮಯ್ಯ, ಶಿಕ್ಷಕರಾದ ಸುಧಾಮಣಿ, ಗಣಪತಿ, ನಾಗೇಶ್ರಾವ್, ಸುರೇಶ್, ಶಂಕರೇಗೌಡ, ಪ್ರಕಾಶ್, ವಿಜಯ್ಕುಮಾರ್, ಮುಖಂಡರಾದ ಕುಮಾರ್, ಕಿರಣ್, ನವೀನ್, ಮಾದೇಗೌಡ, ರೋಹಿತ್, ವಿದ್ಯಾರ್ಥಿಗಳು ಇದ್ದರು.