ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿ

26kpp1 seminar
ಕೊಪ್ಪ ಸಂತ ಜೋಸೆರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಮಕ್ಕಳ ಸುರಕ್ಷತೆ ಕಾರ್ಯಾಗಾರವನ್ನು ಶಾಸಕ ಟಿ.ಡಿ.ರಾಜೇಗೌಡ, ನಾಗಮೋಹನ್ ದಾಸ್ ಉದ್ಘಾಟಿಸಿದರು. ಮಂಜು, ವರಲಕ್ಷ್ಮೀ, ನವೀನ್‌ಕುಮಾರ್ ಇತರರಿದ್ದರು. -----------
Published on

ಕೊಪ್ಪ: ಮಕ್ಕಳ ಹಕ್ಕುಗಳ ರಕ್ಷಣೆಯ ಜತೆಗೆ ಅವರ ಸುರಕ್ಷತೆ, ಭದ್ರತೆ ಹಾಗೂ ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸುವುದು ಎಲ್ಲರ ಜವಾಬ್ದಾರಿ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಸಂತ ಜೋಸೆರ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಮಕ್ಕಳ ಸುರಕ್ಷತೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಕ್ಕಳಿಗೆ ಉತ್ತಮವಾದ ಬಾಲ್ಯ ರೂಪಿಸಲು ಮುಂದಾಬೇಕು. ಮಕ್ಕಳು ಸಮಸ್ಯೆ, ದೌರ್ಜನ್ಯ, ಕಾನೂನು ಸಂಘರ್ಷಕ್ಕೆ ಒಳಗಾಗದಂತೆ ನಿಗಾವಹಿಸಬೇಕು ಎಂದರು.

ಇತ್ತೀಚೆಗೆ ಇಲ್ಲಿನ ವಸತಿ ಶಾಲೆಯೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ಇಂಥ ಘಟನೆಗಳು ಮರುಕಳಿಸಬಾರದು. ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ಕಾಲಕಾಲಕ್ಕೆ ಆಯೋಜಿಸಬೇಕು ಎಂದರು.

ಕೆಲ ಸಂಘಟನೆಗಳು ಸ್ವಾರ್ಥಕ್ಕಾಗಿ ಮಕ್ಕಳಲ್ಲಿ ಕೆಟ್ಟ ಭಾವನೆಯನ್ನು ಮೂಡಿಸುತ್ತಿರುವುದು ಸರಿಯಲ್ಲ. ಜಿಲ್ಲೆಯ ಪ್ರತಿ ಶಾಲೆ, ವಸತಿ ಶಾಲೆಗಳಲ್ಲಿ ದೂರು ಪೆಟ್ಟಿಗೆ ಇರಿಸಲು ಕೆಆರ್‌ಡಿಎಲ್‌ನಿಂದ ಅನುದಾನ ನೀಡುತ್ತೇನೆ ಎಂದು ತಿಳಿಸಿದರು.

ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಮಂಜು ಮಾತನಾಡಿ, ಎರಡೂವರೆ ವಷರ್ದಿಂದ ಜಿಲ್ಲೆಯಲ್ಲಿ ಮಕ್ಕಳಿಗೆ ಆಗುತ್ತಿರುವ ತೊಂದರೆ ಮನಗಂಡು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಶಿಕ್ಷಕರು ಪ್ರತಿ ಮಗುವಿನ ಮಾಹಿತಿ ಪಡೆದಿರಬೇಕು. ಮುಂದಿನ ದಿನದಲ್ಲಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಸಂವಿಧಾನದ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್, ಮಕ್ಕಳ ಸುರಕ್ಷತೆ ಬಗ್ಗೆ ಯುನಿಸ್ೆ ಪ್ರಾದೇಶಿಕ ಸಂಯೋಜಕ ಕೆ.ರಾಘವೇಂದ್ರ ಭಟ್ ಮಾತನಾಡಿದರು.

ತಾಪಂ ಇಒ ನವೀನ್‌ಕುಮಾರ್, ಸುಧೀರ್, ಬಿಇಒ ರಾಘವೇಂದ್ರ, ವರಲಕ್ಷ್ಮೀ, ರಮೇಶ್, ಮುಖ್ಯಶಿಕ್ಷಕಿ ಸಿಸ್ಟರ್ ಅನಿತಾ ಶಾಂತಿ ಮಿನೇಜನ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್.ಎಲ್.ದೀಪಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net