ಮಕ್ಕಳಲ್ಲಿ ವೈಜ್ಞಾನಿಕ ಪ್ರಜ್ಞೆ ಜಾಗೃತಗೊಳಿಸಿ

ctd-----1.
Published on

ಚಿತ್ರದುರ್ಗ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ ಜಾಗೃತಗೊಳಿಸಿದರೆ ಅವರ ಭವಿಷ್ಯ ಉಜ್ವಲವಾಗಲಿದೆ ಎಂದು ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾ ಲಯದ ಪ್ರಾಚಾರ‌್ಯ ಡಾ.ಜಿ.ಯು.ನಾಗರಾಜ್ ಹೇಳಿದರು.

ಹೊಳಲ್ಕೆರೆ ತಾಲೂಕು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಮತ್ತು ಗಣಿತದಲ್ಲಿ ಮಕ್ಕಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ನಿವಾರಿಸಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ‌್ಯ ಆರ್.ಕೆ.ರಾಮಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಲು ಕಾರ‌್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಬಿಇ.ಡಿ ಕಾಲೇಜು ಉಪನ್ಯಾಸಕರಾದ ಮಮತಾ ಮತ್ತು ಮಧು ತೀರ್ಪುಗಾರರಾಗಿ ಹಾಗೂ ಶಿಕ್ಷಕರು, ಉಪನ್ಯಾಸಕರು ಹಾಗೂ 450 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

-----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net