

ಎನ್.ಆರ್.ಪುರ: ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮುಖ್ಯ ಉದ್ದೇಶ ಎಂದು ಕಳ್ಳಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ದೀಪಕ್ ನಿಡಘಟ್ಟ ತಿಳಿಸಿದರು.
ಕಳ್ಳಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿವಿಧ ಶಾಲೆ, ಕಾಲೇಜುಗಳಲ್ಲಿ ವಿಜ್ಞಾನ ಕುರಿತ ಉಪನ್ಯಾಸ, ಚರ್ಚಾ ಸ್ಪರ್ಧೆ, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಚಟುವಟಿಕೆ ನಡೆಸಲಾಗುತ್ತಿದೆ. ೆ.28ರಂದು ವಿಜ್ಞಾನಿ ಸರ್. ಸಿ.ವಿ.ರಾಮನ್ ಅವರು ವಿಶ್ವಕ್ಕೆ ರಾಮನ್ ಎೆಕ್ಟ್ ಎಂಬ ಸಿದ್ಧಾಂತ ತೋರಿಸಿಕೊಟ್ಟ ದಿನವಾಗಿದೆ. ಅವರ ಸಾಧನೆಯನ್ನು ನೆನಪಿಸುವುದು ಸಹ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ದೇಶವಾಗಿದೆ ಎಂದರು. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಅಂಗನವಾಡಿ ಶಿಕ್ಷಕಿ ಆಶಾ, ಪವಿತ್ರಾ ಮತ್ತಿತರರಿದ್ದರು.