ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

28cmy1
Published on

ಚಿಂತಾಮಣಿ : ದೇಶದ ಭವಿಷ್ಯ ಮಕ್ಕಳ ಮೇಲೆ ನಿಂತಿದೆ. ಹೀಗಾಗಿ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದು ಅವಶ್ಯಕ ಎಂದು 2ನೇ ಆಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಎಸ್. ಮಂಜುನಾಥ್ ಅಭಿಪ್ರಾಯಪಟ್ಟರು.

ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರ ಏರ್ಪಡಿಸಿದ್ದ ಮಮತೆಯತೊಟ್ಟಿಲು ಮತ್ತು ಬಾಲರಥಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ, ಬಾಲ್ಯ ವಿವಾಹ ಪದ್ಧತಿ ಜೀವಂತವಾಗಿದೆ. ಬಾಲಕಿಯರ ಮೇಲೆ ದೌರ್ಜನ್ಯ ನಡೆಯತ್ತಿದೆ. ಮಕ್ಕಳ ಅಪಹರಣ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಕೂಡ ನಡೆಯುತ್ತಿದೆ. ಹೀಗಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಇವುಗಳನ್ನು ನಿರ್ಮೂಲನೆ ಮಾಡಬೇಕು ಎಂದರು.

ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಮೇಗೌಡ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪರಿವೀಕ್ಷಣಾ ರಕ್ಷಣಾಧಿಕಾರಿ ಮಂಜುನಾಥ ಮತ್ತು ಪವಿತ್ರಾ, ನಗರದ ಸೌಂದರ್ಯ ಸಂಸ್ಥೆ ಅಧ್ಯಕ್ಷೆ ಡಾ.ವಿಜಯಾ ಇದ್ದರು.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net