ಮಕ್ಕಳಿಗೆ ಉತ್ತಮ ಶಿಕ್ಷಣ, ವಾರ್ಗದರ್ಶನ ನೀಡಿ: ನ್ಯಾಯಾಧೀಶ ಬಿ.ಪಿ.ದೇವವಾನೆ ಸಲಹೆ, ಜಾಗೃತಿಗಾಗಿ ಜಾಥಾ ಆಯೋಜನೆ

12-kolara-1
Published on

ಕೋಲಾರ: ಮಕ್ಕಳಿಗೆ ಉತ್ತಮ ಶಿಕ್ಷಣ, ವಾರ್ಗದರ್ಶನ ನೀಡಿ ಪ್ರಜ್ಞಾವಂತ ಪ್ರಜೆಯನ್ನಾಗಿ ವಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಪೋಕ್ಸೋ ಪ್ರಕರಣಗಳ ವಿಶೇಷ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಬಿ.ಪಿ.ದೇವವಾನೆ ತಿಳಿಸಿದರು.

ನಗರದ ಮಹಾತ್ಮ ಗಾಂಧಿ ಚೌಕದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂದ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಾಥಾಗೆ ಚಾಲನೆ ನೀಡಿ ವಾತನಾಡಿದರು.

ಒಂದು ದೇಶದ ನಿಜವಾದ ಆಸ್ತಿ ಎಂದರೆ ಆ ದೇಶದ ಆರೋಗ್ಯವಂತ, ಪ್ರಜ್ಞಾವಂತ ನಾಗರಿಕರು ಆಗಿರುತ್ತಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಹೀಗಾಗಿ ಬಾಲ್ಯದಲ್ಲಿ ಮಕ್ಕಳನ್ನು ಸರಿದಾರಿಯಲ್ಲಿ ನಡೆಸಬೇಕಾದ್ದು ಪಾಲಕರು ಮತ್ತು ಸವಾಜದ ಜವಾಬ್ದಾರಿ ಆಗಿರುತ್ತದೆ ಎಂದರು.

ಮಕ್ಕಳನ್ನು ಎಂತಹ ಕಠಿಣ ಪರಿಸ್ಥಿತಿಯಲ್ಲೂ ದುಡಿಮೆಗೆ ಹಾಕಬಾರದು. ಸಂಪಾದನೆಗೆ ಇಳಿಸಿದರೆ ದಾರಿ ತಪ್ಪುವ ಸಾಧ್ಯತೆ ಹೆಚ್ಚು. ಇದನ್ನು ಮನಗಂಡು ಅವರನ್ನು ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳು ಸಿಗುತ್ತಿದ್ದು, ಹಲವೆಡೆ ದಾನಿಗಳು ನೆರವಾಗುತ್ತಿದ್ದಾರೆ. ವಿದ್ಯಾರ್ಥಿಗಳು ಇದೆಲ್ಲದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ವಾತನಾಡಿ, ಪ್ರತಿಯೊಬ್ಬ ಪ್ರಜೆ ಬಾಲಕಾರ್ಮಿಕ ಪದ್ಧತಿ ವಿರೋಧಿಯಾಗಬೇಕು. ಬಾಲಕಾರ್ಮಿಕರು ಕಂಡುಬಂದರೆ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಇಲಾಖೆಗಳು ಅಥವಾ ಜಿಲ್ಲಾಡಳಿತಕ್ಕೆ ವಾಹಿತಿ ನೀಡಬೇಕು. ಶಾಲೆಗೆ ಹೋಗುವ ವಯಸ್ಸಿನಲ್ಲಿ ಮಕ್ಕಳು ದುಡಿಮೆಯಲ್ಲಿ ತೊಡಗುವುದು ಸರಿಯಲ್ಲ. ಒಂದು ಮಗು ಶಾಲೆ ಬಿಟ್ಟು ದುಡಿಮೆಯಲ್ಲಿ ತೊಡಗಿದೆ ಎಂದರೆ ಅದು ಆ ಕುಟುಂಬಕ್ಕೋ, ಆ ಮಗುವಿಗೋ ತಾತ್ಕಾಲಿಕ ಲಾಭ ನೀಡಬಹುದು. ಆದರೆ ಅದೇ ಮಗು ಓದಿ ಮುಂದೆ ಬಂದರೆ ಆ ಕುಟುಂಬ, ದೇಶಕ್ಕೆ ಆಸ್ತಿಯಾಗುತ್ತಾನೆ ಎಂದರು.

ಕಾರ್ಮಿಕ ಇಲಾಖೆ ಸೇರಿ ಇತರ ಇಲಾಖೆಗಳು ಬಾಲ ಕಾರ್ಮಿಕ ವಿರೋಧಿ ಚಟುವಟಿಕೆಗಳನ್ನು ಒಂದು ದಿನಕ್ಕೆ ಸೀಮಿತ ವಾಡಬಾರದು. ಇಂದು ಶಾಲಾ ಮಕ್ಕಳನ್ನು ಕರೆತಂದು ಜಾಥಾ ವಾಡಿಸಿದ ವಾತ್ರಕ್ಕೆ ಇದು ಮುಗಿಯುವುದಿಲ್ಲ. ಕಾರ್ಖಾನೆ, ಗ್ಯಾರೇಜ್, ಹೋಟೆಲ್, ಡಾಬಾ, ಬೇಕರಿ ಮುಂತಾದ ಕಡೆ ಭೇಟಿ ನೀಡಿ ಪರಿಶೀಲಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಕಡೆ ಭೇಟಿ ನೀಡಿ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿದ್ದರೆ ಸಂಬಂಧಪಟ್ಟ ಟಕ, ಸಂಸ್ಥೆ, ವಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಕಠಿಣ ಶಿಕ್ಷೆಗೆ ಸಹ ಗುರಿಪಡಿಸಲಾಗುವುದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ್ ಎಸ್.ಹೊಸಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಕಾಂತ್ ಬಿ.ಪಾಟೀಲ್, ವಕೀಲರ ಸಂದ ಜಿಲ್ಲಾಧ್ಯಕ್ಷ ಜಿ.ಶ್ರೀಧರ್, ವಕೀಲರ ಸಂದ ಕಾರ್ಯದರ್ಶಿ ರುಪತಿ ಗೌಡ, ಜಾಗೃತಿ ಸೇವಾ ಸಂಸ್ಥೆ ಅಧ್ಯಕ್ಷ ಕೆ.ಆರ್.ಧನರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರೂ ಸಹಕರಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಆಶಯ. ಇದನ್ನು ಕಾರ್ಯರೂಪಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಪ್ರಾವಾಣಿಕವಾಗಿ ಬಾಲಕಾರ್ಮಿಕರನ್ನು ಗುರುತಿಸಿ ಶಿಕ್ಷಣ ಕೊಡಿಸಲು ಶ್ರಮಿಸಬೇಕು. ವೆಂಕಟ್‌ರಾಜಾ, ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net