ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ

HUN-JULY-21-2{ST JOSEPH HPS}
Published on

ಹುಣಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪಾಲಕರ ಪಾತ್ರ ಬಹುದೊಡ್ಡದು ಎಂದು ಸಂಪನ್ಮೂಲ ವ್ಯಕ್ತಿ ಸಿಸ್ಟರ್ ಕಾರ್ಮಲೆಟ್ ಅಭಿಪ್ರಾಯಪಟ್ಟರು.
ನಗರದ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ಮತ್ತು ಪಾಲಕರ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಒಳ್ಳೆಯ ನಡತೆಯನ್ನು ಕಲಿಸುವಲ್ಲಿ ಶಿಕ್ಷಕರ ಜತೆಗೆ ಪಾಲಕರ ಪಾತ್ರವೂ ಅಷ್ಟೇ ದೊಡ್ಡದಿರುತ್ತದೆ. ಪಾಲಕರು ತಮ್ಮ ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು ಸುಮ್ಮನಾದರೆ ಅಪಾಯ ಖಂಡಿತ. ಒಳ್ಳೆಯ ಸಂಸ್ಕಾರ ಕಲಿಸಿ ಸತ್ಪ್ರಜೆಗಳನ್ನಾಗಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.
ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫಿಲೋಮಿನಾ ನೊರೋನ್ಹ ಮಾತನಾಡಿ, ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು ಎಂದು ಹೇಳಿದರು.
ಶಿಕ್ಷಕರಾದ ಸುಮಾ ಮತ್ತು ಚಂದ್ರಿಕಾ ಶಾಲಾ ವರದಿ ಮಂಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಾಸು ಮತ್ತು ಶ್ರೀನಿವಾಸ್ ಶಾಲಾ ನಿಯಮಗಳನ್ನು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net