ಮಣ್ಣಿನ ನಿರ್ವಹಣೆಯಿಂದ ರೋಗ ಹತೋಟಿ

5 nrp 2 soil
ಎನ್.ಆರ್.ಪುರ ತಾಲೂಕಿನ ಆಲಂದೂರಿನಲ್ಲಿ ಅಡಕೆ ಹಾಗೂ ಕಾಳುಮೆಣಸು ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರವನ್ನು ಪ್ರಗತಿಪರ ಕೃಷಿಕ ಜಾನಕೀರಾಂ ಉದ್ಘಾಟಿಸಿದರು. ಬಿ.ಕೆ.ನಾರಾಯಣಸ್ವಾಮಿ, ಪಿ.ಕೆ.ಬಸವರಾಜಪ್ಪ, ನವೀನ್, ಚೇತನ್, ತೀರ್ಥೇಶ್, ರೋಹಿತ್ ಇತರರಿದ್ದರು.
Published on

ಎನ್.ಆರ್.ಪುರ: ತೋಟಗಳ ಮಣ್ಣು ಹಾಗೂ ನೀರಿನ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಮಾಡಿದರೆ ಬೆಳೆಗೆ ರೋಗಗಳು ಬಾರದಂತೆ ತಡೆಗಟ್ಟಬಹುದು ಎಂದು ತಾಲೂಕು ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಬಿ.ಕೆ.ಜಾನಕೀರಾಂ ಸಲಹೆ ನೀಡಿದರು.

ಕಡಹಿನಬೈಲು ಗ್ರಾಪಂ ಆಲಂದೂರಿನ ಶಾಲಾ ಆವರಣದಲ್ಲಿ ಲಿಂಗದಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ರೈತರಿಗಾಗಿ ಆಯೋಜನೆ ಮಾಡಿದ್ದ ಅಡಕೆ ಹಾಗೂ ಕಾಳುಮೆಣಸು ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ರೈತರು ಮಣ್ಣಿನ ಲವತ್ತತೆ ಹೆಚ್ಚಿಸಲು ತೋಟ, ಗದ್ದೆಗಳಲ್ಲಿ ಹಸಿರೆಲೆ ಗೊಬ್ಬರದ ಗಿಡಗಳನ್ನು ಬೆಳೆಯಬೇಕು ಎಂದು ಹೇಳಿದರು.

ಲಿಂಗದಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕಿ ಉಷಾ ಮಾತನಾಡಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ನೀಡುವ ತರಬೇತಿಗಳಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದರು.

ಕೃಷಿಕ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಮಾತನಾಡಿ, ರೈತರು ಮಣ್ಣು ಪರೀಕ್ಷೆ ಮಾಡಿಸಿಕೊಂಡು ಅಗತ್ಯ ಇರುವ ಗೊಬ್ಬರ ನೀಡಬೇಕು. ರೋಗ ಮತ್ತು ಕೀಟಗಳ ಹತೋಟಿಗೆ ಸರಿಯಾದ ಮಾಹಿತಿ ಪಡೆದು ಔಷಧ ಸಿಂಪಡಣೆ ಮಾಡಬೇಕು. ಇಲ್ಲದಿದ್ದರೆ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮವಾಗಿ ಸಲು ಹಾಳಾಗಲಿದೆ ಎಂದರು.

ಕಡೂರು ತಾಲೂಕಿನ ಪ್ರಗತಿಪರ ಕೃಷಿಕ ನಟರಾಜ್ ಮಾತನಾಡಿ, ರೈತರು ಅಡಕೆ ಬೆಳೆ ಮಾತ್ರ ನಂಬಿಕೊಳ್ಳದೆ ಮಿಶ್ರ ಬೆಳೆ ಬೆಳೆಯಬೇಕು ಎಂದು ಹೇಳಿದರು. ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ರೈತರು ಗುಣಮಟ್ಟದ ಬೀಜಗಳನ್ನು ಆಯ್ಕೆ ಮಾಡಿದರೆ ಬೆಳೆಗಳಲ್ಲಿ ಅನೇಕ ರೋಗಗಳನ್ನು ತಡೆಗಟ್ಟಬಹುದು ಎಂದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೋಹಿತ್ ಮಾತನಾಡಿ, ಕೀಟಗಳ ಬೆಳೆಗಳ ನಿರ್ವಹಣೆ, ಮಣ್ಣಿನ ಆರೋಗ್ಯ ನಿರ್ವಹಣೆ, ಅಡಕೆ, ರೋಗ ಬಾಧೆ ನಿರ್ಹಹಣೆ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು.ತಾಲೂಕು ಕೃಷಿಕ ಸಮಾಜದ ಕಾರ್ಯದರ್ಶಿ ನವೀನ್, ಖಜಾಂಚಿ ಚೇತನ್, ನಿರ್ದೇಶಕ ತೀರ್ಥೇಶ್, ನೇತಾಜಿ ಯುವಕ ಸಂಘದ ಅಧ್ಯಕ್ಷ ಎನ್.ಎಸ್.ಅಜಂತ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net