

ತರೀಕೆರೆ: ನಮ್ಮ ಮಣ್ಣಿನ ಸೊಗಡಿನ ಕಲೆಗಳನ್ನು ಉಳಿಸುವ ಪ್ರಯತ್ನ ನಿರಂತರವಾಗಿರಬೇಕು ಎಂದು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಎಸ್.ಬಾಲಾಜಿ ಹೇಳಿದರು.
ಅಜ್ಜಂಪುರ ಪಟ್ಟಣದ ಖಾಸಗಿ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕನ್ನಡ ಜಾನಪದ ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಸೇವಾದೀಕ್ಷೆ ಹಾಗೂ ಘಟಕ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಲೋಕಕ್ಕೆ ಜಾನಪದದ ಕೊಡುಗೆ ಅನನ್ಯ. ಈ ದಿಸೆಯಲ್ಲಿ ಯುವ ಪೀಳಿಗೆಯನ್ನು ಈ ಕಲೆಯತ್ತ ಸೆಳೆಯುವ ಪ್ರಯತ್ನ ಮಾಡಬೇಕು. ಅವರಿಗೆ ಸೂಕ್ತ ತರಬೇತಿ ಮೂಲಕ ಸಜ್ಜುಗೊಳಿಸಬೇಕು ಎಂದರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಓಣಿತೋಟ ರತ್ನಾಕರ್, ಮಹಿಳಾ ಘಟಕದ ಅಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ, ತಾಲೂಕು ಅಧ್ಯಕ್ಷೆ ಕೆ.ಸಿ.ವಿಜಯಕುಮಾರಿ, ಹೋಬಳಿ ಘಟಕ ಅಧ್ಯಕ್ಷ ರಮೇಶ್‌ನಾಯ್ಕ, ರಂಗಭೂಮಿ ಕಲಾವಿದ ಸತೀಶ್, ದಲಿತ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಭಕ್ತನಕಟ್ಟೆ ಲೋಕೇಶ್ ಮತ್ತಿತರರಿದ್ದರು.