ಮತದಾರರು ಬೆಂಬಲಿಸಲು ಮನವಿ

election
ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಕುಂದಾಪುರದ ಆಡಳಿತ ಸೌಧದ ಕೋರ್ಟ್ ಹಾಲ್‌ನಲ್ಲಿ ಗುರುವಾರ ನಡೆಯಿತು.
Published on

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷರಾಗಿದ್ದ ಅಶೋಕ ಹಾರನಹಳ್ಳಿ ಅವರ ಬೆಂಬಲಿತ ಅಭ್ಯರ್ಥಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಏ.13ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಮತ ನೀಡುವ ಮೂಲಕ ಬೆಂಬಲಿಸಬೇಕೆಂದು ಅಭ್ಯರ್ಥಿ ಡಾ.ಭಾನುಪ್ರಕಾಶ್ ಶರ್ಮ ಮನವಿ ಮಾಡಿದರು.

ತಮ್ಮ ಕ್ರಮ ಸಂಖ್ಯೆ ಒಂದು ಆಗಿದೆ. ಬ್ರಾಹ್ಮಣ ಸಮುದಾಯದ ಧಾರ್ಮಿಕ, ಸಾಮಾಜಿಕ, ಆರ್ಥಿಕ, ಸಂಘಟಿತ ಹೋರಾಟ, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ತಮ್ಮ ಗುರಿಯಾಗಿದೆ. ಇದುವರೆಗೆ ಏಳು ಸಲ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ. ವೈದಿಕ ಪಂಡಿತರೊಬ್ಬರು ಇದೇ ಮೊದಲ ಬಾರಿಗೆ ಸ್ಪರ್ಧಿಸುವಂತಾಗಿದೆ. ಹೀಗಾಗಿ ತಮ್ಮನ್ನು ಬೆಂಬಲಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಏ.13ರಂದು ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಗರದ ಕೃಷ್ಣಮೂರ್ತಿಪುರಂನಲ್ಲಿನ ಭಗಿನಿ ಸೇವಾ ಸಮಾಜದಲ್ಲಿ ಈ ಚುನಾವಣೆ ನಡೆಯಲಿದೆ. ತಾವು ಪ್ರಚಾರಕ್ಕಾಗಿ ಪ್ರವಾಸ ಕೈಗೊಂಡಲ್ಲೆಲ್ಲ ಉತ್ತಮ ಸ್ಪಂದನೆ ದೊರೆತಿದೆ. ಮಹಾಸಭಾದ ಸುವರ್ಣ ಮಹೋತ್ಸವ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದು, ತಾವು ಈ ಕಾರ್ಯ ಪೂರ್ಣಗೊಳಿಸಲಿದ್ದೇವೆ ಎಂದರು.

ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಸ್ಪರ್ಧಿಸಿರುವ ಡಿ.ಟಿ.ಪ್ರಕಾಶ್, ಕೆ.ಆರ್. ಜಗದೀಶ್ ಕಡಕೊಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net