

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೈಸೂರು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಗೂ ಮೈಸೂರಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ತಾಲ್ಲೂಕು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ರಾಜಿ ಸಂಧಾನದ ಮೂಲಕ ನ್ಯಾಯಾಲಯಗಳಲ್ಲಿರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ 15 ವರ್ಷಗಳ ಹೆಚ್ಚು ಕಾಲ ಅನುಭವ ಹೊಂದಿರುವ ವಕೀಲರು ಹಾಗೂ 15 ವರ್ಷ ಸೇವೆ ಸಲ್ಲಿಸಿದ ನಿವೃತ್ತ ನ್ಯಾಯಾಧೀಶರು, ಮಾಜಿ ಸೈನಿಕರು, ವಿಮಾ ಕಂಪನಿಗಳ ಹಿರಿಯ ಅಧಿಕಾರಿಗಳು, ಬ್ಯಾಂಕಿoಗ್ ಸಂಸ್ಥೆಯ ಹಿರಿಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ಶಿಕ್ಷಕರು ಮತ್ತು ವೈದ್ಯರನ್ನು ಮಧ್ಯಸ್ಥಿಕೆದಾರರ ಸೇವೆಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಮನೋಭಾವನೆಯನ್ನು ಹೊಂದಿರುವ ಇಚ್ಛೆವುಳ್ಳ ನ್ಯಾಯವಾದಿಗಳು/ವಕೀಲರು, ನಿವೃತ್ತ ನ್ಯಾಯಾಧೀಶರು, ಮಾಜಿ ಸೈನಿಕರು, ವಿಮಾ ಕಂಪನಿಗಳ ಹಿರಿಯ ಅಧಿಕಾರಿಗಳು, ಬ್ಯಾಂಕಿoಗ್ ಸಂಸ್ಥೆಯ ಹಿರಿಯ ಅಧಿಕಾರಿಗಳು, ನಿವೃತ್ತ ಪ್ರಾಧ್ಯಾಪಕರು/ಶಿಕ್ಷಕರು ಮತ್ತು ವೈದ್ಯರು ನಿಗದಿತ ಅರ್ಜಿ ನಮೂನೆಯನ್ನು ಪ್ರಾಧಿಕಾರದಲ್ಲಿ ಪಡೆದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 15 ರ ಸಂಜೆ 5.00 ಗಂಟೆಯ ಒಳಗೆ ಖುದ್ದಾಗಿ ಮಾನ್ಯ ಸದಸ್ಯ ಕಾರ್ಯದಶಿರ್ಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್ ಸೆಂಟರ್, ಹೊಸ ನ್ಯಾಯಾಲಯಗಳ ಆವರಣ, ಮಳಲವಾಡಿ, ಜಯನಗರ 5ನೇ ಕ್ರಾಸ್, ಮೈಸೂರು-570014 ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-2330130 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಅಮರ್ ನಾಥ್.ಕೆ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.