ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಗುರುವಾರ ಮಂಡಿಸಿದ ಬಜೆಟ್ ಜನವಿರೋಧಿಯಾಗಿದೆ ಎಂದು ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್ ಟೀಕಿಸಿದ್ದಾರೆ.
ಆರ್ಥಿಕ ಸಂಕಷ್ಟದ ಕಾಲದಲ್ಲಿ ಮಾನವೀಯತೆ ಮರೆತು ಜನರಿಗೆ ಹೊರೆ ಉಂಟು ಮಾಡಿದ್ದಾರೆ. ಆದಾಯ ಕ್ರೋಢೀಕರಣಕ್ಕೆ ಜನರ ತೆರಿಗೆ ಅವಲಂಬಿಸದೆ ಮಾರುಕಟ್ಟೆ ನಿರ್ಮಾಣ, ಮಲ್ಟಿ ಲೆವೆಲ್ ಪಾರ್ಕಿಂಗ್ ಮೊದಲಾದವುಗಳನ್ನು ನಿರ್ಮಿಸಿ ಆದಾಯ ಪಡೆಯಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನೀರಿನ ಅದಾಲತ್ ನಲ್ಲಿ ಅರ್ಜಿ ಸಲ್ಲಿಸಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇರುವಾಗಲೇ ನೀರಿನ ಸಂಪರ್ಕ ಕಡಿತ ಮಾಡಿದ್ದಾರೆ. ಪಾಲಿಕೆ ಆಡಳಿತ ಅದನ್ನು ಸರಿಪಡಿಸಬೇಕು ಎಂದು ಮನಪಾ ಸದಸ್ಯ ಲ್ಯಾನ್ಸಿ ಲಾಟ್ ಪಿಂಟೋ ಹೇಳಿದರು.
ಪಾಲಿಕೆ ಜನರಿಗೆ ಯಾವುದೇ ತೆರಿಗೆ ಹೆಚ್ಚಳ ಮಾಡಬಾರದು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತೆರಿಗೆ ಹೆಚ್ಚಳ ಮಾಡಿಲ್ಲ ಎಂದು ಶಶಿಧರ ಹೆಗ್ಡ ಹೇಳಿದರು.
ಪಾಲಿಕೆ ಸದಸ್ಯರಾದ ನವೀನ್ ಡಿಸೋಜ, ಪ್ರವೀಣ್ ಚಂದ್ರ ಆಳ್ವ, ಭಾಸ್ಕರ ಕೆ ಮೊದಲಾದವರು ಉಪಸ್ಥಿತರಿದ್ದರು.