ಮನೆ ಮನೆಗೆ ಕಂದಾಯ ಇಲಾಖೆ ಕಾರ್ಯಕ್ರಮಗಳು ಡಿಸಿ, ಮತ್ತಿತರರ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ

Published on


ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮ ವಾಸ್ತವ್ಯ

ಪ್ರತಿ ತಿಂಗಳ ಮೂರನೇ ಶನಿವಾರದಂದು ಒಂದೊಂದು ಗ್ರಾಮ ಪಂಚಾಯಿತಿ ವಾಸ್ತವ್ಯ ಮಾಡುವುದು ಕಡ್ಡಾಯವಾಗಿದೆ. ಅಧಿಕಾರಿಗಳು ಯಾವುದೇ ಗ್ರಾಮ ನಿವಾಸಿಗರ ಮನೆಯಲ್ಲಿ ಊಟ ಮಾಡುವ ಹಾಗಿಲ್ಲ. ಅಂಗನವಾಡಿ/ ಹಾಸ್ಟೆಲ್‌ಗಳಲ್ಲೇ ಊಟ ಮಾಡಬೇಕು ಎಂದು ಹೇಳಿದರು.

ಈ ಹಿಂದೆಯೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತಾದರೂ ಕರೊನಾ ಕಾರಣದಿಂದ ಸ್ಥಗಿತಗೊಂಡಿತ್ತು. ಈಗ ಅದನ್ನು ಪುನಾರಂಭಿಸಲಾಗುತ್ತಿದೆ. ತಿಂಗಳಿಗೊಮ್ಮೆ ಎಲ್ಲ ಜಿಲ್ಲಾಧಿಕಾರಿಗಳು ಹಾಗು ಕಂದಾಯ ಇಲಾಖೆ ಅದಿಕಾರಿಗಳು ಗ್ರಾಮ ಪಂಚಾಯಿತಿ ವಾಸ್ತವ್ಯ ಮಾಡುವುದು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಹಳ್ಳಿಗಳ ಜನರಿಗೆ ಕಂದಾಯ ಇಲಾಖೆ ಸೌಲಭ್ಯಗಳನ್ನು ಮನೆಗೆ ತೆರಳಿ ಒದಗಿಸುವ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಇತರ ಅಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ಕಾರ್ಯಕ್ರಮ ಪ್ರತಿ ತಿಂಗಳ ಮೂರನೇ ಶನಿವಾರ ನಡೆಯಲಿದೆ.

ಕಂದಾಯ ಇಲಾಖೆಯ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.

ವಿಜಯವಾಣಿ ಸುದ್ದಿಜಾಲ ಬೆಂಗಳೂರು

-ಗುಡಿಸಲು ವಾಸಿಗಳನ್ನು ಗುರುತಿಸಿ ಮನೆ ನಿರ್ಮಿಸಿಕೊಡಲು ಕ್ರಮ ವಹಿಸಬೇಕು.

-ಅರ್ಹರಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಅನರ್ಹರು ಪಡೆದಿದ್ದರೆ ಕ್ರಮ ಕೈಗೊಳ್ಳಬೇಕು.

-ಶಾಲೆ,ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಪರಿಶೀಲಿಸಬೇಕು.

-ಗ್ರಾಮದಲ್ಲಿ ಎಸ್ಸಿ/ಎಸ್ಟಿ/ಬಿಸಿಎಂ ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಪರಿಶೀಲಿಸಬೇಕು.

-ಅತೀವೃಷ್ಟಿ/ಅನಾವೃಷ್ಟಿ ಎದುರಿಸಲು ಮುಂಜಾಗ್ರತೆ ಕೈಗೊಳ್ಳಬೇಕು.

-ಬರ/ಪ್ರವಾಹ ಪರಿಹಾರ ಒದಗಿಸಬೇಕು.

-ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಬೇಕು.

-ಆಶ್ರಯ ಯೋಜಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಕಾಯ್ದಿರಿಸಲು ಕ್ರಮ ಕೈಗೊಳ್ಳಬೇಕು.

-ಗ್ರಾಮದಲ್ಲಿ ಸ್ಮಶಾನ ಲಭ್ಯತೆ ಪರಿಶೀಲಿಸಬೇಕು ಇಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸಬೇಕು.

-ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುವ ಬಗ್ಗೆ ಪರಿಶೀಲಿಸಬೇಕು. ಬಿಟ್ಟು ಹೋದ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲೇ ಆದೇಶ ನೀಡಬೇಕು.

-ಎಲ್ಲ ಪಹಣಿಗಳಲ್ಲಿಯೂ ಕಾಲಂ 3 ಮತ್ತು ಕಾಲಂ 9 ತಾಳೆ ಹೊಂದುವಂತೆ ಸೂಕ್ತ ಆದೇಶ ಹೊರಡಿಸಬೇಕು.

-ಪಹಣಿ ಲೋಪದೋಷ, ಪಹಣಿ ಕಾಲಂ 3 ಮತ್ತು ಆಕಾರ್ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

-ಗ್ರಾಮಕ್ಕೆ ಭೇಟಿ ನೀಡುವ ಮೊದಲೇ ಕಂದಾಯ ಅಧಿಕಾರಿಗಳು ಗ್ರಾಮ ಭೇಟಿ ಸಂದರ್ಭದಲ್ಲಿ ನೀಡಲಾಗುವ ಕಾರ್ಯಸೂಚಿಗಳನ್ವಯ ಜನರಿಂದ ಅರ್ಜಿಗಳನ್ನು ಸಂಗ್ರಹಿಸಿ ವಿಲೇವಾರಿ ಪ್ರಕ್ರಿಯೆಗೆ ಒಳಪಡಿಸಬೇಕು.

ಡಿಸಿ ಗ್ರಾಮ ವಾಸ್ತವ್ಯದ ಉದ್ದೇಶಗಳು:

ಬಾಕ್ಸ್:

ಆಧಾರ್ ಕಾರ್ಡ್ ಆಧರಿಸಿ 60 ವರ್ಷ ತುಂಬಿದ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಮನೆಗೆ ತೆರಳಿ ಪಿಂಚಣಿ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸುತ್ತೇವೆ. ಇದರಿಂದ ಬೋಗಸ್ ಮತ್ತು ಬ್ರೋಕರ್ಸ್ ಹಾವಳಿ ತಡೆ ಬೀಳುತ್ತದೆ ಎಂದು ಸಚಿವ ಅಶೋಕ್ ತಿಳಿಸಿದರು.

ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ವರ್ಷ 7,500 ಕೋಟಿ ರೂ. ಪಿಂಚಣಿ ನೀಡಲಾಗುತ್ತದೆ. ಇದರಲ್ಲಿ ಬೋಗಸ್ ತಡೆಗಟ್ಟಲು ದೇಶದಲ್ಲೇ ಮೊದಲ ಬಾರಿಗೆ ವೆಬ್ ಸೈಟ್ ಮಾಡುತ್ತಿದ್ದೇವೆ. ಜ.27 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವೆಬ್ ಸೈಟ್ ಲೋಕಾರ್ಪಣೆ ಮಾಡಲಿದ್ದಾರೆ.

ಪಿಂಚಣಿ ಬೋಗಸ್ ತಡೆಗೆ ವೆಬ್‌ಸೈಟ್…

ಆಧಾರ್ ಆಧಾರಿತ ಪಿಂಚಣಿ ಸೌಲಭ್ಯ!

ಬಾಕ್ಸ್:

ವಿರೇಂದ್ರ ಪಾಟೀಲ್ ಅವರು ರಾತ್ರೋರಾತ್ರಿ ಮನೆಗೆ ಕಳುಹಿಸಿದವರು ಕಾಂಗ್ರೆಸ್‌ನವರು. ಕಾಂಗ್ರೆಸ್ ಅಧಿಕಾರ ನಡೆಸಿದ ಸಂದರ್ಭದಲ್ಲಿ ವೀರಪ್ಪ ಮೊಯ್ಲಿಯವರ ಬಟ್ಟೆ ಹರಿದು ಹಾಕಿ ಓಡಿಸಿದ್ದರು. ಕಾಂಗ್ರೆಸ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅವರು ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಹೇಳಲು ಯತ್ನಿಸುತ್ತಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ನಾಯಕರು ಮಲಗಿದ್ದರು. ಆದರೆ. ಈಗ ಎದ್ದು ಬಂದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಸಮರ್ಥವಾದ ವಿರೋಧ ಪಕ್ಷವೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿ ಕಾರಿದರು.

ರಾಜ್ಯದಲ್ಲಿ ಸಮರ್ಥ ಪ್ರತಿಪಕ್ಷವೇ ಇಲ್ಲ

ಬಾಕ್ಸ್:

ರಾಜಕಾರಣದಲ್ಲಿ ಖಾತೆ ಕ್ಯಾತೆ ಸರ್ವೇ ಸಾಮಾನ್ಯ. ಎಲ್ಲರನ್ನ ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ. ಸಿಎಂ ಮೇಲೆ ಎಲ್ಲರಿಗೂ ಭರವಸೆ ಇದೆ. ಸಮಸ್ಯೆಯನ್ನು ಬೇಗ ಉಪಶಮನ ಮಾಡಲಾಗುತ್ತದೆ. ನಾನು ಯಾವುದೇ ಖಾತೆ ಕ್ಯಾತೆ ತೆಗಿದಿಲ್ಲ. ನಾನು ಗೃಹ ಇಲಾಖೆಯನ್ನೂ ಕೇಳಿಲ್ಲ. ನಾನು ಖಾತೆ ಬದಲಾವಣೆಗೆ ಕೇಳೇ ಇಲ್ಲ.

ಎಲ್ಲರನ್ನು ತೃಪ್ತಿ ಪಡಿಸಲು ದೇವರಿಂದಲೂ ಸಾಧ್ಯವಿಲ್ಲ-ಅಶೋಕ್

ಕೋಟ್:

-ಆರ್.ಅಶೋಕ್, ಕಂದಾಯ ಸಚಿವ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net