ಮಲೇರಿಯಾ ತಡೆಗೆ ಮುಂಜಾಗ್ರತೆ ವಹಿಸಿ

06 SARAG 3
ಸರಗೂರು ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಮಲೇರಿಯಾ ವಿರೋಧಿ ದಿನ ಆಚರಿಸಲಾಯಿತು.
Published on

ಸರಗೂರು: ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂದು ಆರೋಗ್ಯ ಆಡಳಿತಾಧಿಕಾರಿ ಡಾ.ಅಲೀಮ್ ಪಾಷಾ ತಿಳಿಸಿದರು.

ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮಲೇರಿಯಾ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಲೇರಿಯಾ ಮಾರಣಾಂತಿಕ ಕಾಯಿಲೆ. ವಿಪರೀತ ಚಳಿ, ಜ್ವರ, ತಲೆನೋವು, ಮೈಕೈ ನೋವು, ತೀವ್ರ ಸ್ಥಿತಿಯಲ್ಲಿ ಪ್ರಜ್ಞೆ ತಪ್ಪುವುದು ರೋಗದ ಲಕ್ಷಣವಾಗಿದೆ. ಈ ಜ್ವರಕ್ಕೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದರಿಂದ ಗುಣಪಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ರವಿರಾಜ್, ಶಿವಮ್ಮ, ಜಯಶ್ರೀ, ಮಹೇಶ್, ಅಭಿ, ರಮೇಶ್, ರಾಜೇಶ್, ಆಶಾ ಕಾರ್ಯಕರ್ತೆ ಮಹದೇವಮ್ಮ, ತೋಳಮ್ಮ, ಶಶಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net