ಮಳೆಗಾಲ ಪ್ರಾರಂಭವಾಗಿದೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು / ಸಾರ್ವಜನಿಕರಿಂದ ದೂರು ಬರದಂತೆ ಅಧಿಕಾರಿಗಳು ಕೆಲಸ ಮಾಡಬೇಕು / ಮಧ್ಯವರ್ತಿಗಳನ್ನು ದೂರವಿಡಬೇಕು / ಕೊತ್ತೂರು ಮಂಜುನಾಥ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸಾರ್ವಜನಿಕರು ಸೇರಿದಂತೆ ಹಾಸ್ಟೆಲ್ ವಿದ್ಯಾರ್ಥಿಗಳು ಸಮಸ್ಯೆಗಳು ಹೇಳಿಕೊಂಡಾಗ ಅಧಿಕಾರಿಗಳು ಸ್ಪಂದಿಸಬೇಕು. ಅದಕ್ಕಾಗಿ ಸರ್ಕಾರವು ನಿಮ್ಮನ್ನು ನೇಮಕ ಮಾಡಿರೋದು. ನಿರ್ಲಕ್ಷ್ಯ ವಹಿಸಿದರೆ ಕ್ರಮ ವಹಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳ ಊಟದಲ್ಲಿ ಗುಣಮಟ್ಟ, ಬೆಳಗ್ಗೆ ಬಿಸಿ ನೀರು ಮುಂತಾದ ಮೂಲಭೂತ ಸೌಕರ್ಯಗಳ ಬಗ್ಗೆ ದೂರುಗಳು ಬಂದಿವೆ. ಕೂಡಲೇ ಸರಿಪಡಿಸಬೇಕು. ಆಹಾರ ಸಾಮಗ್ರಿಗಳ ವಿತರಣೆಯಲ್ಲಿ ಲೋಪ ಕಂಡುಬAದರೆ ಸಂಬAಧಿಸಿದ ಅಧಿಕಾರಿ ಗುತ್ತಿಗೆದಾರನ ವಿರುದ್ದ ಕ್ರಮ ಜರುಗಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸಬೇಕು. ಮಕ್ಕಳಿಂದಾಗಲಿ, ಪೋಷಕರಿಂದಾಗಲಿ ದೂರುಗಳು ಬರಬಾರದು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳಿಂದ ರೈತರಿಗೆ ಸಾಕಷ್ಟು ಯೋಜನೆಗಳಿವೆ. ಈ ಬಗ್ಗೆ ರೈತರಿಗೆ ಮೊದಲು ಮಾಹಿತಿ ಕೊಡಬೇಕು. ನೈಜ ರೈತರನ್ನು ಗುರುತಿಸಿ ಅವಕಾಶ ಕಲ್ಪಿಸಬೇಕು. ರೈತರಿಗೆ ಯಂತ್ರೋಪಕರಣಗಳು ಸೇರಿದಂತೆ ಸಹಾಯಧನವನ್ನು ಪಡೆಯಲು ಒಂದಿಷ್ಟು ಮಧ್ಯವರ್ತಿಗಳು ಹುಟ್ಟಿಕೊಂಡಿದೆ. ಇಲಾಖೆಯಿಂದ ಬರುವ ಅಷ್ಟು ಸೌಲಭ್ಯ ಮಧ್ಯವರ್ತಿಗಳ ಕೈಸೇರುತ್ತಿವೆ. ಬಡ ರೈತನ ಕೈಸೇರುತ್ತಿಲ್ಲ. ಇದಕ್ಕೆ ಅಧಿಕಾರಿಗಳ ಬೆಂಬಲ ಇದೆ. ಕೂಡಲೇ ಈ ಪ್ರವೃತ್ತಿ ನಿಲ್ಲಬೇಕು. ಇಲ್ಲದೇ ಹೋದರೆ ನಾವೇ ನೇರವಾಗಿ ಆ ಮಧ್ಯವರ್ತಿಗಳನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತರು ಕೃಷಿಗೆ ಸಂಬAಧಿಸಿದ ಸಮಸ್ಯೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಯಾರಾದರೂ ತಿಳಿಸಿದರೆ ಸ್ಪಂದಿಸುವುದಿಲ್ಲ ಎಂಬ ದೂರುಗಳು ಹೆಚ್ಚು ಕೇಳಿ ಬಂದಿದೆ. ಇದುವರೆಗೂ ರೈತರ ಸಮಸ್ಯೆಗಳ ಬಗ್ಗೆ ಎಷ್ಟು ಅರ್ಜಿಗಳು ಬಂದಿದೆ. ಎಷ್ಟು ಪರಿಹಾರವಾಗಿವೆ. ಎಷ್ಟು ಜನ ಸೌಲಭ್ಯಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಪಲಾನುಭವಿಗಳ ಪಟ್ಟಿಯನ್ನು ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಮಳೆಗಾಲ ಪ್ರಾರಂಭವಾಗಿದೆ. ಬಿತ್ತನೆ ಬೀಜ, ಗೊಬ್ಬರ ಕೊರತೆ ಉಂಟಾಗದAತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಇಲಾಖೆಯಲ್ಲಿ ಸರ್ಕಾರದಿಂದ ಆಗಬೇಕಾದ ಕೆಲಸಗಳ ಬಗ್ಗೆ ಗಮನಕ್ಕೆ ತನ್ನಿ. ಕೆಲವು ಆಸ್ಪತ್ರೆಯಲ್ಲಿ ಔಷಧೀಗಳಿಗೆ ಚೀಟಿ ಕೊಟ್ಟು ಹೊರಗಡೆ ಕಳುಹಿಸುತ್ತಾರೆ. ಮುಂದೆ ಇಂತಹ ಯಾವುದೇ ದೂರುಗಳು ಬರಬಾರದು. ಈಗಾಗಲೇ ಹೋಬಳಿ ಕೇಂದ್ರಗಳಲ್ಲಿ ಹೊಸ ಕಟ್ಟಡಗಳು ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇವೆಗೆ ಲಭ್ಯವಿರಬೇಕು. ಸಿಬ್ಬಂದಿ ಕೊರತೆ ಯಾಗಬಾರದು ಎಂದು ತಾಲೂಕು ಆರೋಗ್ಯ ಅಧಿಕಾರಿ ನಾರಾಯಣಸ್ವಾಮಿಗೆ ಸೂಚನೆ ನೀಡಿದರು.

ಯಾವುದೇ ಕಾಮಗಾರಿಯಾಗಲಿ ಪೂರ್ಣಗೊಂಡ ನಂತರವೇ ಹಣ ಬಿಡುಗಡೆ ಮಾಡಬೇಕು. ಜಲಜೀವನ್ ಮಿಷನ್ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು. ಮೀನುಗಾರಿಕೆ ಇಲಾಖೆ ವತಿಯಿಂದ ಮನೆಗಳು ಸೇರಿದಂತೆ ಪೋತ್ಸಾಹಧನ ಸಿಗುತ್ತವೆ. ಇದು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಆಗಬೇಕು. ನಗರ ಸಾರಿಗೆಯನ್ನು ಮಾಲೂರು ಮಾರ್ಗದ ಮಂಗಸAದ್ರ ಪಿಜಿ ಕೇಂದ್ರ ಹಾಗೂ ಬಂಗಾರಪೇಟೆ ರಸ್ತೆಯ ದಿಂಬ ವರಗೂ ವಿಸ್ತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವೇಮಗಲ್ ಮುನಿಯಪ್ಪ, ತಹಶಿಲ್ದಾರ್ ನಯನ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಚಿತ್ರ ೧೬ ಕೆ.ಎಲ್.ಆರ್. ೦೨ : ತಾಲ್ಲೂಕು ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದರು. ಎಂ.ಎಲ್.ಸಿ.ಅನಿಲ್‌ಕುಮಾರ್, ತಾಲ್ಲೂಕು ಪಂಚಾಯ್ತಿ ಆಡಳಿತಾಧಿಕಾರಿ ಡಾ.ಮೈತ್ರಿ, ಇಒ ಮಂಜುನಾಥ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net