ಮಹದೇಶ್ವರಸ್ವಾಮಿ ದೇಗುಲದಲ್ಲಿ ಹುಂಡಿ ಹಣ ಕಳವು

15NGD1
ನಂಜನಗೂಡು ತಾಲೂಕಿನ ಚುಂಚನಹಳ್ಳಿ ಮಹದೇಶ್ವರಸ್ವಾಮಿ ದೇವಾಲಯ.
Published on

ನಂಜನಗೂಡು: ತಾಲೂಕಿನ ಚುಂಚನಹಳ್ಳಿ ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಖದೀಮರು ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿ ಪರಾರಿಯಾಗಿದ್ದಾರೆ.

ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಶ್ರೀ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರವಷ್ಟೇ ಜಾತ್ರಾ ಮಹೋತ್ಸವ ಜರುಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹುಂಡಿಗೆ ಹಣ ಹಾಕಿದ್ದರು ಎನ್ನಲಾಗಿದ್ದು, ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆಯಬೇಕಿತ್ತು. ಅಷ್ಟರಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವುದು ಬುಧವಾರ ಮುಂಜಾನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net