ಮಹನೀಯರ ಜೀವನಾದರ್ಶ ಅನುಸರಿಸಿ

sali Bherya 1
Published on

ಸಾಲಿಗ್ರಾಮ : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಮುಖ್ಯ ಶಿಕ್ಷಕ ಶಿವಪ್ಪ ತಿಳಿಸಿದರು. ಭೇರ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಧ್ವಜಾಹರೋಣರ ನೆರವೇರಿಸಿ ಅವರು ಮಾತನಾಡಿದರು.
ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯಲು ನಮ್ಮ ಹಿರಿಯರು ಮಾಡಿದ ಹೋರಾಟ ಮತ್ತು ತ್ಯಾಗದ ಹಿನ್ನೆಲೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಇತ್ತೀಚಿನ ವ್ಯವಸ್ಥೆಗಳನ್ನು ನೋಡಿದರೆ ಯುವಕರು ದೇಶದ ಬಗ್ಗೆ ಇನ್ನಷ್ಟು ಕಳಕಳಿ ರೂಢಿಸಿಕೊಳ್ಳಬೇಕು ಎನಿಸುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಹೊಂದಿ ದೇಶದ ಸೇವೆ ಮಾಡಲು ಸಂಕಲ್ಪ ಮಾಡಬೇಕು ಎಂದವರು ಸಲಹೆ ನೀಡಿದರು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಣೆ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net