ಮಹನೀಯರ ತತ್ವ-ಸಿದ್ಧಾಂತ ಮೈಗೂಡಿಸಿಕೊಳ್ಳಿ

5 KRN-3
Published on

ಕೆ.ಆರ್.ನಗರ: ಮಹನೀಯರ ಜಯಂತಿಯನ್ನು ಕೇವಲ ಆಚರಿಸಿದರೆ ಸಾಲದು. ಅವರ ತತ್ವ, ಸಿದ್ಧಾಂತ, ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ಆಚರಣೆಗೆ ಅರ್ಥ ಸಿಗುತ್ತದೆ ಎಂದು ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 116ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಇಬ್ಬರು ದಲಿತ ಸಮಾಜದ ಎರಡು ಕಣ್ಣುಗಳಿದ್ದಂತೆ. ಸಮಾಜಕ್ಕೆ ಅವರು ನೀಡಿರುವ ಕೊಡುಗೆಗಳು ಅಪಾರ ಎಂದರು.

ದೇಶದಲ್ಲಿ ಆಹಾರ ಸಮಸ್ಯೆ ಎದುರಾಗಿ ಒಂದು ಹೊತ್ತಿನ ಊಟಕ್ಕೆ ತೊಂದರೆ ಇದ್ದ ಸಂದರ್ಭದಲ್ಲಿ ಬಾಬೂಜಿ ಅವರು ಕೃಷಿ ಮಂತ್ರಿಯಾಗಿ ಹಸಿರು ಕ್ರಾಂತಿ ಮಾಡುವ ಮೂಲಕ ದೇಶಕ್ಕೆ ಆಹಾರ ಭದ್ರತೆ ಒದಗಿಸಿದರು. ಬಾಬೂಜಿ ಅವರ ಜೀವನದ ಪ್ರತಿಯೊಂದು ಹಂತಗಳು ದೇಶದ ಜನರಿಗೆ ಸ್ಫೂರ್ತಿದಾಯಕವಾಗಿವೆ ಎಂದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಚ್.ಸ್ವಾಮಿ, ನಿವೃತ್ತ ಶಿಕ್ಷಕ ರಾಜಯ್ಯ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ನಗರಾಧ್ಯಕ್ಷ ರಮೇಶ್, ಗ್ರಾಪಂ ಸದಸ್ಯರಾದ ಹರೀಶ್, ರವಿ, ಮಾದಿಗ ದಂಡೋರ ತಾಲೂಕು ಅಧ್ಯಕ್ಷ ಎಂ.ಎಸ್.ನಂಜುಂಡಸ್ವಾಮಿ, ಡಿಸಿಸಿ ಸದಸ್ಯ ತಿಮ್ಮಯ್ಯ, ಮುಖಂಡರಾದ ಈರಯ್ಯ, ಸಿದ್ದಾಪುರ ರಮೇಶ್, ತಿಮ್ಮಶೆಟ್ಟಿ, ಎಂ.ಎಸ್.ಮಹದೇವ್, ರವಿಪೂಜಾರಿ, ಕಚಿಪಿಚಿ ವೆಂಕಟೇಶ್, ಬಸವರಾಜು, ಬೋರಪ್ಪಶೆಟ್ಟಿ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net