

ಸಂಗೀತ ಸಾಮ್ರಾಟ್ ಮಹಮ್ಮದ್ ರಫಿ ಅವರ ಸ್ಮರಣಾರ್ಥ ಹಿಂದಿ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಜುಲೈ 30 ರಂದು ಸಂಜೆ 6 ಗಂಟೆಗೆ ಜೆ.ಎಲ್.ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಲಾಪೋಷಕ ಟಿ.ಆರ್.ಹರೀಶ್ ಪ್ರಸಾದ್, ಕರ್ನಾಟಕ ಸುಗಮ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ನಾಗರಾಜ್ ವಿ ಬೈರಿ, ಕಾಂಗ್ರೆಸ್ ಮುಖಂಡ ಎಚ್.ವಿ.ರಾಜೀವ್, ಹಿರಿಯ ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಗೋಪಿನಾಥ್, ರಾಷ್ಟ್ರಕವಿ ಕುವೆಂಪು ಕಲಾನಿಕೇತನ ಅಧ್ಯಕ್ಷ ಕುವೆಂಪು ಪ್ರಕಾಶ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶೇಷಾದ್ರಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.