ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಏರಿಕೆಯಾದ ಪರಿಣಾಮ ತಾಲೂಕಿನ ಮೂರು ಕೆಳಮಟ್ಟದ ಸೇತುವೆಗಳು ಮುಳುಗಡೆಯಾಗಿವೆ. ನದಿಗಳ ನೀರಿನ ಮಟ್ಟ ಹೆಚ್ಚಳದಿಂದ ನದಿ ತೀರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ.
ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ ಹಾಗೂ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ-ದತ್ತವಾಡ ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆಗಳು ಜಲಾವೃತಗೊಂಡಿದ್ದರೂ ಗ್ರಾಮಗಳಿಗೆ ಪರ್ಯಾಯ ರಸ್ತೆ ಸಾರಿಗೆ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ. ತಾಲೂಕಾಡಳಿತದಿಂದ ಪ್ರವಾಹ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಚಿದಂಬರ ಕುಲಕರ್ಣಿ ತಿಳಿಸಿದ್ದಾರೆ.
ಹೆಚ್ಚಿದ ಒಳ ಹರಿವು: ಕೃಷ್ಣಾ ನದಿಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 22,250 ಕ್ಯೂಸೆಕ್, ದೂಧಗಂಗಾ ನದಿಯಿಂದ 10,910 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಲ್ಲೋಳ ಬ್ಯಾರೇಜ್‌ನಿಂದ ಒಟ್ಟು 33,160 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಕೃಷಿ ಚಟುವಟಿಗೆಗೆ ಮಳೆ ಅಡ್ಡಿ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಮುಂಗಾರು ಕೃಷಿ ಚಟುವಟಿಕೆ ಸಿದ್ಧತೆಗೆ ಅಡ್ಡಿಯಾಗಿದೆ. ಮಳೆಯಿಂದಾಗಿ ಹೊಲ-ಗದ್ದೆಗಳಲ್ಲಿ ನೀರು ನಿಂತಿದೆ. ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ಬಿತ್ತನೆ ಕಾರ್ಯ ವಿಳಂಬವಾಗಲಿದೆ. ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಹೆಸರು, ಶೇಂಗಾ, ಸೂರ್ಯಕಾಂತಿ, ಸೋಯಾಬೀನ್ ಬೀಜ ಖರೀದಿಸಿ ಮನೆಯಲ್ಲಿ ಇರಿಸಿಕೊಂಡಿದ್ದಾರೆ. ಮಳೆ ಮುಂದುವರಿದರೆ ಬಿತ್ತನೆ ಕಾರ್ಯ ವಿಳಂಬವಾಗುತ್ತದೆ ಎಂದು ರೈತರು ಆತಂಕದಲ್ಲಿದ್ದಾರೆ.
ಬೆಳಗಾವಿ ಸೇರಿ ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲೂ ಮಳೆಯಾಗಿ ಕೃಷ್ಣಾ ನದಿ ಮತ್ತು ಅದರ ಉಪನದಿಗಳಲ್ಲಿ ನೀರಿನ ಒಳಹರಿವು ಹೆಚ್ಚುತ್ತಿದೆ. ಮಳೆಯಿಂದ ಕೆಲವು ರಸ್ತೆಗಳಿಗೆ ಹಾನಿಯಾಗಿದೆ. ಬೆಳಗಾವಿಯಷ್ಟೇ ಅಲ್ಲ ರಾಜ್ಯದ ವಿವಿಧೆಡೆ ಲೋಕೋಪಯೋಗಿ ಇಲಾಖೆ ರಸ್ತೆಗಳಿಗೂ ಹಾನಿ ಉಂಟಾಗಿದೆ. ಕೆಲವೆಡೆ ಭೂಕುಸಿತಗಳು ಕಂಡುಬಂದಿವೆ. ಎಲ್ಲ ಕಡೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ. | ಸತೀಶ ಜಾರಕಿಹೊಳಿ ಸಚಿವ
ಕೆಳಮಟ್ಟದ ಮೂರು ಸೇತುವೆಗಳು ಮುಳುಗಡೆ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಚಿಕ್ಕೋಡಿ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಏರಿಕೆಯಾದ ಪರಿಣಾಮ ತಾಲೂಕಿನ ಮೂರು ಕೆಳಮಟ್ಟದ ಸೇತುವೆಗಳು ಮುಳುಗಡೆಯಾಗಿವೆ. ನದಿಗಳ ನೀರಿನ ಮಟ್ಟ ಹೆಚ್ಚಳದಿಂದ ನದಿ ತೀರದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ ಹಾಗೂ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ-ದತ್ತವಾಡ ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ. ಸೇತುವೆಗಳು ಜಲಾವೃತಗೊಂಡಿದ್ದರೂ ಗ್ರಾಮಗಳಿಗೆ ಪರ್ಯಾಯ ರಸ್ತೆ ಸಾರಿಗೆ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ. ತಾಲೂಕಾಡಳಿತದಿಂದ ಪ್ರವಾಹ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಚಿದಂಬರ ಕುಲಕರ್ಣಿ ತಿಳಿಸಿದ್ದಾರೆ. ಹೆಚ್ಚಿದ ಒಳ ಹರಿವು: ಕೃಷ್ಣಾ ನದಿಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 22,250 ಕ್ಯೂಸೆಕ್, ದೂಧಗಂಗಾ ನದಿಯಿಂದ 10,910 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಲ್ಲೋಳ ಬ್ಯಾರೇಜ್‌ನಿಂದ ಒಟ್ಟು 33,160 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಕೃಷಿ ಚಟುವಟಿಗೆಗೆ ಮಳೆ ಅಡ್ಡಿ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಮುಂಗಾರು ಕೃಷಿ ಚಟುವಟಿಕೆ ಸಿದ್ಧತೆಗೆ ಅಡ್ಡಿಯಾಗಿದೆ. ಮಳೆಯಿಂದಾಗಿ ಹೊಲ-ಗದ್ದೆಗಳಲ್ಲಿ ನೀರು ನಿಂತಿದೆ. ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ಬಿತ್ತನೆ ಕಾರ್ಯ ವಿಳಂಬವಾಗಲಿದೆ. ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಹೆಸರು, ಶೇಂಗಾ, ಸೂರ್ಯಕಾಂತಿ, ಸೋಯಾಬೀನ್ ಬೀಜ ಖರೀದಿಸಿ ಮನೆಯಲ್ಲಿ ಇರಿಸಿಕೊಂಡಿದ್ದಾರೆ. ಮಳೆ ಮುಂದುವರಿದರೆ ಬಿತ್ತನೆ ಕಾರ್ಯ ವಿಳಂಬವಾಗುತ್ತದೆ ಎಂದು ರೈತರು ಆತಂಕದಲ್ಲಿದ್ದಾರೆ.
ಬೆಳಗಾವಿ ಸೇರಿ ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲೂ ಮಳೆಯಾಗಿ ಕೃಷ್ಣಾ ನದಿ ಮತ್ತು ಅದರ ಉಪನದಿಗಳಲ್ಲಿ ನೀರಿನ ಒಳಹರಿವು ಹೆಚ್ಚುತ್ತಿದೆ. ಮಳೆಯಿಂದ ಕೆಲವು ರಸ್ತೆಗಳಿಗೆ ಹಾನಿಯಾಗಿದೆ. ಬೆಳಗಾವಿಯಷ್ಟೇ ಅಲ್ಲ ರಾಜ್ಯದ ವಿವಿಧೆಡೆ ಲೋಕೋಪಯೋಗಿ ಇಲಾಖೆ ರಸ್ತೆಗಳಿಗೂ ಹಾನಿ ಉಂಟಾಗಿದೆ. ಕೆಲವೆಡೆ ಭೂಕುಸಿತಗಳು ಕಂಡುಬಂದಿವೆ. ಎಲ್ಲ ಕಡೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ.
ಸತೀಶ ಜಾರಕಿಹೊಳಿ ಸಚಿವ