

ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ 05 ವರ್ಷಗಳ ಅವಧಿಗೆ ನೇಮಕಾತಿ ಮಾಡುವ ಸಂಬoಧ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಅವಧಿಯನ್ನು ಜುಲೈ 31 ರ ವರೆಗೆ ವಿಸ್ತರಿಸಲಾಗಿದೆ.
ಇದರ ಸಂಪೂರ್ಣ ವಿವರವು ಮೈಸೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.uni-mysore.ac.in ನಲ್ಲಿ ಲಭ್ಯವಿರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ವಿವರಗಳನ್ನು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ನಿಂದ ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.