ಮಹಿಳಾ ಸಂಶೋಧನಾ ವಿದ್ವಾಂಸರು ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮ

KSOU-14
Published on

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಹತ್ತು ದಿನಗಳ 'ಸಂಶೋಧನಾ ವಿಧಾನಶಾಸ್ತç ಕೋರ್ಸ್ M.Phil./Ph.D./PDF ಸಮಾಜ ವಿಜ್ಞಾನದಲ್ಲಿ ಮಹಿಳಾ ಸಂಶೋಧನಾ ವಿದ್ವಾಂಸರು' ಎಂಬ ಕಾರ್ಯಗಾರದ ಕಾರ್ಯಕ್ರಮವನ್ನು ಜುಲೈ 21 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಮೈಸೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷರಾದ ಪ್ರೊ. ಚಂದ್ರಮೌಳಿ ಅವರು ಭಾಗವಹಿಸಲಿದ್ದಾರೆ. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ DOS ನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಲಲಿತಾ ಅಶ್ವತ್ ಅವರು ಪ್ರಮುಖ ಭಾಷಣ ಮಾಡಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

 ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಿಜಿಸ್ಟರ್ ಅವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ., ಶೈಕ್ಷಣಿಕ ಡೀನ್ ಅವರಾದ ಪ್ರೊ. ರಾಮನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಅವರಾದ ಡಾ. ಎನ್.ಆರ್ ಚಂದ್ರೇಗೌಡ, ಮೌಲ್ಯಮಾಪನದ ರಿಜಿಸ್ಟಾçರ್ ಅವರಾದ ಪ್ರೊ. ಸಿ.ಎಸ್. ಆನಂದ ಕುಮಾರ್, ಹಣಕಾಸು ಅಧಿಕಾರಿಗಳಾದ ಪ್ರೊ. ನಿರಂಜನ್ ರಾಜ್ ಅವರು ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net