`ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಟಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ ಪ್ರಮುಖವಾಗಿದೆ / ಹಕ್ಕಿಗೆ ಚ್ಯುತಿ ತರುವುದು ಅಪರಾಧ / ಸುನಿಲ ಎಸ್.ಹೊಸಮನಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಸುಮಾರು ೨೦ ವರ್ಷಗಳ ಹಿಂದೆ ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂದಿದೆ. ಈ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆಯ ಹಕ್ಕು, ವಸತಿ ಹಕ್ಕು, ಜೀವನಾಂಶ ಹಕ್ಕು, ಪರಿಹಾರ ಪಡೆಯುವ ಹಕ್ಕು ಇದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ ಎಸ್.ಹೊಸಮನಿ ತಿಳಿಸಿದರು.

ಜಿಲ್ಲಾಡಳಿತ, ಜಿಪಂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳ ಇಲಾಖೆ ಆಶ್ರಯದಲ್ಲಿ ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ `ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಟಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ' ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಸದರಿ ಕಾಯಿದೆ ಜಾರಿಗೆ ಶಿಶು ಅಭಿವೃದ್ದಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ವಕೀಲರ ಪಾತ್ರ ಬಹಳಷ್ಟಿದ್ದು, ಕೌಟುಂಬಿಕ ಹಿಂಸೆಯಿAದ ಶೋಷಣೆಗೆ ಒಳಗಾದ ಮಹಿಳೆಯರನ್ನು ಸಂರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದಲೇ ಈ ಕಾನೂನು ಅನುಷ್ಟಾನ ಮಾಡುವ ಭಾಗೀದಾರ ಇಲಾಖೆಗಳ ಅಧಿಕಾರಿಗಳು ಮಹಿಳಾ ದೌರ್ಜನ್ಯ ತಡೆ ಕಾಯಿದೆಯ ಕುರಿತು ಅರಿತುಕೊಳ್ಳಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಬಾಲ್ಯವಿವಾಹ ಸಹಾ ಕೌಟುಂಬಿಕ ದೌರ್ಜನ್ಯಕ್ಕೆ ಒಂದು ಕಾರಣವಾಗಿದೆ, ಈ ಹಿನ್ನಲೆಯಲ್ಲಿ ಭಾಗೀದಾರ ಇಲಾಖೆ ಅಧಿಕಾರಿಗಳು ಬಾಲ್ಯವಿವಾಹ ನಡೆಯುವುದನ್ನು ಪ್ರಮುಖ ಜವಾಬ್ದಾರಿಯನ್ನಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಮಾಜಕ್ಕೆ ಮಾರಕವಾಗಿರುವ ಬಾಲ್ಯವಿವಾಹ ತಡೆಗಟ್ಟುವಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಿಶು ಅಭಿವೃದ್ದಿ ಅಧಿಕಾರಿಗಳು,

ಪೊಲೀಸ್ ಅಧಿಕಾರಿಗಳು ಹೊಣೆಯನ್ನು ಅರಿತು ಕೆಲಸ ಮಾಡಬೇಕು, ವಿಷಯ ಗಮನಕ್ಕೆ ಬರುತ್ತಿದ್ದಂತೆ ತಡೆಯಲು ಮುಂದಾಗಬೇಕು. ಆ ಹೆಣ್ಣು ಮಗುವನ್ನು ರಕ್ಷಿಸಬೇಕು ಎಂದು ತಿಳಿಸಿದರು.

ಹೆಣ್ಣು ಮಕ್ಕಳಿಗೂ ಶಿಕ್ಷಣದ ಹಕ್ಕು ಇದೆ. ಅಂತಹ ಹಕ್ಕಿಗೆ ಚ್ಯುತಿ ತಂದು ೧೮ ವರ್ಷ ವಯಸ್ಸಿಗೆ ಮುನ್ನವೇ ಬಾಲ್ಯವಿವಾಹ ಮಾಡುವುದು ಅಪರಾಧ ಮಾತ್ರವಲ್ಲ, ಮದುವೆಯಲ್ಲಿ ಪಾಲ್ಗೊಂಡ ಪೋಷಕರು ಸೇರಿದಂತೆ ಎಲ್ಲರಿಗೂ ಶಿಕ್ಷೆಯಾಗುತ್ತದೆ ಎಂದು ಎಚ್ಚರಿಸಿದರು.

ಬಾಲ್ಯವಿವಾಹದಿಂದಾಗಿ ಸಣ್ಣ ವಯಸ್ಸಿಗೆ ತಾಯಿಯಾಗಿ ಹುಟ್ಟುವ ಮಗು ಅನಾರೋಗ್ಯ ಪೀಡಿತವಾಗುತ್ತದೆ. ಆಟ, ಶಿಕ್ಷಣದ ವಯಸ್ಸಿನಲ್ಲಿ ಸಂಸಾರದ ಜವಾಬ್ದಾರಿಯನ್ನು ಬಲವಂತವಾಗಿ ಹೆಗಲಿಗೆ ಹಾಕುಗ ಇಂತಹ ಸಾಮಾಜಿಕ ಪೀಡೆಗೆ ಕೊನೆಯಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.

ಕಾರ್ಯಾಗಾರದಲ್ಲಿ ನೀಡುವ ಮಾಹಿತಿಯನ್ನು ಪರಿಣಾಮಕಾರಿಯಾಗಿ ಪಡೆದು ತಮ್ಮ ಕೆಲಸದ ಸ್ಥಳಗಳಲ್ಲಿ ಅನುಷ್ಟಾನಗೊಳಿಸಬೇಕು ಎಂದು ಕರೆ ನೀಡಿ, ಇದೇ ಸಂದರ್ಭದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಿಗುವ ಸೌಲಭ್ಯಗಳ ಕುರಿತು ತಿಳಿಸಿಕೊಟ್ಟರು.

ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ ಮಾತನಾಡಿ, ವಿವಿಧ ಇಲಾಖೆಗಳಲ್ಲಿ, ಕೃಷಿ ಕಾರ್ಮಿಕರಾಗಿ ದುಡಿಯುವ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಅದರ ಕುರಿತು ದೂರು ನೀಡುವಂತೆ ಕ್ರಮವಹಿಸಬೇಕು. ದೌರ್ಜನ್ಯ ತಡೆಗೆ ಸಮಾಜವೇ ಜತೆಯಾಗಿ ನಿಲ್ಲಬೇಕು ಎಂದರು.

ಡಿವೈಎಸ್‌ಪಿ ನಾಗ್ತೆ ಮಾತನಾಡಿ, ಕೌಟುಂಬಿಕ ದೌರ್ಜನ್ಯ ಕಾಯಿದೆ ನಿರ್ವಹಣೆಯಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಅತಿ ಮಹತ್ವದ್ದಾಗಿದೆ. ಮಹಿಳೆಯರು ಮಕ್ಕಳ ಮೇಳೆ ನಡೆಯುವ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಸದಾ ಸಿದ್ದವಿದ್ದು, ಕಾಯಿದೆ ಅನುಷ್ಟಾನದಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸದರಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಿ.ಜೆ.ರೋಹಿತ್, ಗೌರಮ್ಮ ಮಾಹಿತಿ ನೀಡಿ, ಮಹಿಳಾ ದೌರ್ಜನ್ಯ ತಡೆ ಮತ್ತು ಕಾಯಿದೆ ಅನುಷ್ಟಾನದ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಎನ್.ಬೈರರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ದಿ ಇಲಾಖೆ ಉಪನಿರ್ದೇಶಕ ಎನ್.ನಾರಾಯಣಸ್ವಾಮಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಡಿ.ವಿನೋದ್‌ರಾಜ್ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೨೦ ಕೆ.ಎಲ್.ಆರ್. ೦೩ : ತಾಪಂ ಸಭಾಂಗಣದಲ್ಲಿ ನಡೆದ `ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣೆ ಕಾಯ್ದೆ ಅನುಷ್ಟಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ' ಕುರಿತ ಕಾರ್ಯಾಗಾರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಸುನಿಲ ಎಸ್.ಹೊಸಮನಿ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net