ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

Application
Published on

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮೈಸೂರು ಇವರ ವತಿಯಿಂದ 2024/25ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ “ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ”ಗಳನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, CRM Domestic Non- Voice ತರಬೇತಿ ಬಯಸುವವರು, “ವಿಶ್ವಾಸ್ ಸಾಫ್ಟ್ಟೆಕ್ ಕಂಪ್ಯೂಟರ್ ತರಬೇತಿ ಸಂಸ್ಥೆ” ತಿ. ನರಸೀಪುರ ಟೌನ್, ತಿ. ನರಸೀಪುರ ತಾಲ್ಲೂಕು ಇಲ್ಲಿ ಹಾಗೂ Domestic Data entry Operator ತರಬೇತಿ ಬಯಸುವವರು “ಕಂಪ್ಯೂಟೆಕ್ ಕಂಪ್ಯೂಟರ್ ಎಜುಕೇಷನ್ ಸೆಂಟರ್” ತಿ. ನರಸೀಪುರ ಟೌನ್, ತಿ. ನರಸೀಪುರ ತಾಲ್ಲೂಕು ಇಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಕನಿಷ್ಟ 10ನೇ ತರಗತಿ ವಿದ್ಯಾರ್ಹತೆ ಪಡೆದಿರುವ, 18 ರಿಂದ 35 ವರ್ಷ ವಯೋಮಿತಿಯೊಳಗೆ ಇರುವ ಆಸಕ್ತ ಮತ್ತು ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ತರಬೇತಿ ಪಡೆಯಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ 6 ಭಾವಚಿತ್ರಗಳೊಂದಿಗೆ ಜುಲೈ 25 ರೊಳಗೆ ನೇರವಾಗಿ ಮೇಲ್ಕಂಡ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ www.kaushalkar.comನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net