ಮಾ.6 ರಂದು ಹಮಾಲಿ ಕಾರ್ಮಿಕರ ಪ್ರತಿಭಟನೆ

Published on

ಸಿದ್ದಾಪುರ : ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಾ.6 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಮಾಲಿ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ತಿಳಿಸಿದರು.

ಹಮಾಲಿ ಕಾರ್ಮಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರಿಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಹಮಾಲಿ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಯಾವುದೇ ಆರ್ಥಿಕ ನೆರವು ಘೋಷಣೆ ಮಾಡಿಲ್ಲ. ಹಮಾಲಿ ಕಾರ್ಮಿಕರ ಕುಟುಂಬಗಳಿಗೆ ಸ್ವಂತ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಸಂಘಟಿತ ಕಾರ್ಮಿಕರಾಗಿರುವ ಹಮಾಲಿ ಕಾರ್ಮಿಕರಿಗೆ ಸರ್ಕಾರ ಶಾಶ್ವತ ಸೂರು ನೀಡಬೇಕು, ಕನಿಷ್ಠ ವೇತನ ನೀಡಬೇಕು ಹಾಗೂ ಸೇವಾ ಭದ್ರತೆಯನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಾ. 6ರಂದು ಹಮ್ಮಿಕೊಂಡಿರುವ ಹೋರಾಟಕ್ಕೆ ಕೊಡಗು ಜಿಲ್ಲೆಯಿಂದ ನೂರಾರು ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಹಮಾಲಿ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯ ಹಾಗೂ ವೇತನವನ್ನು ರಾಜ್ಯದಲ್ಲೂ ನೀಡಬೇಕು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಹಮಾಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳಾದ ಕವನ್ ಕುಮಾರ್, ಸುಲೈಮಾನ್, ಬಿ.ಕೆ. ಗಿರೀಶ್, ಪಿ.ಎ. ನಾಗೇಶ್, ಆಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net