

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(೫೩) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊತ್ತನೂರು ಬಳಿ ಇರುವ ಕನಕಶ್ರೀ ಲೇಔಟ್‌ನ ಅಪಾರ್ಟ್‌ಮೆಂಟ್‌ನ ೪ ನೇ ಮಹಡಿಯ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
೯.೩೦ ಕ್ಕೆ ಡೇವಿಡ್ ಜಾನ್ಸನ್ ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನ ೪ ನೇ ಮಹಡಿಯಿಂದ ಹಾರಿದ್ದಾರೆ. ಜೋರಾದ ಶಬ್ಧ ಬಂದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ಸೆಕ್ಯುರಿಟಿಗಾರ್ಡ್ ಸಮೀಪಕ್ಕೆ ಹೋಗಿ ನೋಡಿದ್ದಾಗ ಡೇವಿಡ್ ಜಾನ್ಸನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ತಲೆ ಮತ್ತು ದೇಹಕ್ಕೆ ತೀವ್ರತರವಾದ ಪೆಟ್ಟಾಗಿರುವ ಕಂಡು ಬಂದಿದ್ದು, ಕೂಡಲೇ ಅವರು ಅವರ ಪತ್ನಿಗೆ ವಿಷಯ ತಿಳಿಸಿ ಆತ್ಪತ್ರೆಗೆ ಕರೆದೊಯ್ದಿದ್ದಾರೆ. ಪರಿಕ್ಷೀಸಿದ ವೈದ್ಯರು ಡೇವಿಡ್ ಜಾನ್ಸನ್ ಅವರು ಮಾರ್ಗಮಧ್ಯೆದಲ್ಲಿಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾನಸಿಕ ಖಿನ್ನತೆಯಿಂದ ಸಾವು?
ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಮಾನಸಿಕ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿರುವ ಕೊತ್ತನೂರು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂತಾಪ:
೧೯೯೬ರಲ್ಲಿ ಭಾರತ ತಂಡದ ಪರ ಟೆಸ್ಟ್ ಪಂದ್ಯ ಆಡಿದ್ದ ಡೇವಿಡ್ ಜಾನ್ಸನ್. ಕೆಪಿಎಲ್ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರ ಆಡಿದ್ದರು. ಇನ್ನು ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗ ಜಾನ್ಸನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.