

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಕ್ಟೋಬರ್ 02 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಅಕ್ಟೋಬರ್ 02 ರಂದು ಬೆಳಗ್ಗೆ 8.30 ಗಂಟೆಗೆ ಗಾಂಧೀ ಸ್ಕ್ವೇರ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ 156ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆ ಗೌರವ ಸಮರ್ಪಣೆಯ ಸಮಾರಂಭದಲ್ಲಿ ಭಾಗವಹಿಸುವರು. ಬೆಳಗ್ಗೆ 09 ಗಂಟೆಗೆ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಾರೆ, ಮಧ್ಯಾಹ್ನ 01 ಗಂಟೆಗೆ ಅರಮನೆ ಆವರಣದಲ್ಲಿರುವ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಸಂಜೆ 4:42 ಗಂಟೆಗೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆಯನ್ನು ಮಾಡಲಿದ್ದಾರೆ. ನಂತರ ರಾತ್ರಿ 7:00 ಗಂಟೆಗೆ ಬನ್ನಿಮಂಟಪ ಕವಾಯಿತು ಮೈದಾನದಲ್ಲಿ ಆಯೋಜಿಸಲಾಗಿರುವ ಪಂಜಿನ ಕವಾಯತಿ (ಟಾರ್ಚೆ ಲೈಟ್ ಪೆರೇಡ್) (ಮಾನ್ಯ ರಾಜ್ಯಪಾಲರು ಭಾಗವಹಿಸಲಿದ್ದಾರೆ) ಭಾಗವಹಿಸುವರು.