ಮುಂಡಗೋಡ ಟಿಎಪಿಸಿಎಂಎಸ್​ಗೆ ರವಿಗೌಡ ಅಧ್ಯಕ್ಷ

4mnd1
Published on

ಮುಂಡಗೋಡ: ಪಟ್ಟಣದ ಪ್ರತಿಷ್ಠಿತ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಸಿಎಂಎಸ್) ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಿ.ಪಂ. ಸದಸ್ಯ ರವಿಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಸಂತೋಷ ಭೋಸಲೆ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಟಿಎಪಿಸಿಎಂಎಸ್​ನ ಒಟ್ಟು 14 ಸ್ಥಾನಗಳಲ್ಲಿ 11 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳು ಜಯ ಗಳಿಸಿದ್ದರು. ಆ ಮೂಲಕ ಸೊಸೈಟಿಯು ಬಿಜೆಪಿ ತೆಕ್ಕೆಗೆ ಬಿದ್ದಿತ್ತು.

ಸರ್ಕಾರದಿಂದ ನಾಮನಿರ್ದೇಶನಗೊಂಡ ರವಿಗೌಡ ಪಾಟೀಲ ಅವರೊಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಸಂತೋಷ ಭೋಸಲೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಶ್ರೀಧರ ಮುಂದಲಮನಿ ಕಾರ್ಯನಿರ್ವಹಿಸಿದರು.

ಈ ವೇಳೆ ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ, ಮುಖಂಡರಾದ ವಿವೇಕ ಹೆಬ್ಬಾರ, ಎಲ್.ಟಿ. ಪಾಟೀಲ, ನಾಗಭೂಷಣ ಹಾವಣಗಿ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ಕೆಂಜೋಡಿ ಗಲಬಿ, ಫಕೀರಸ್ವಾಮಿ ಗುಲ್ಯಾನವರ, ಎಂ.ಡಿ. ಅತ್ತರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net