ಹುಬ್ಬಳ್ಳಿ:
ಮುಖ್ಯಮಂತ್ರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಒಡೆದ ಮನೆಯಂತಾಗಿದೆ.
ಬಣಗಳ ಗುದ್ದಾಟ ಜೋರಾಗಿದೆ.
ಆ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ ಸಿದ್ದರಾಮಯ್ಯ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ಗಿರೀಶ ಗದಿಗೆಪ್ಪಗೌಡ & ಮಾಜಿ ಸಚಿವ ಸಂತೋಷ ಲಾಡ್.
ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಅಲ್ಬಮ್ ಸಾಂಗ್ ಬಿಡುಗಡೆ ಮಾಡಲಾಗಿದ
ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ, ಕರುನಾಡಿನ ಜನತೆಯಿಂದ ಇದು ಕಾಯಂ ಎಂಬ ಸಾಂಗ್ ಬಿಡುಗಡೆ ಮಾಡಲಾಗಿದೆ.
ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಆಲ್ಬಂ ಸಾಂಗ್ ಲೋಕಾರ್ಪಣೆಯಾಗಿದೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಕುರಿತ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ.