ಮುಖ್ಯಮಂತ್ರಿ ವಿರುದ್ಧ ಆಧಾರರಹಿತ ಆರೋಪ

‘ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸೊಸೆ ಹೆಸರಿನಲ್ಲಿ ಬೆಂಗಳೂರಿನಲ್ಲಿ 350 ಕೋಟಿ ರೂ. ಮೌಲ್ಯದ ಪಬ್ ಹೊಂದಿದ್ದಾರೆ’
chamundeshwari_ congrace_ Siddaramaiah EX CM
Published on

‘ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸೊಸೆ ಹೆಸರಿನಲ್ಲಿ ಬೆಂಗಳೂರಿನಲ್ಲಿ 350 ಕೋಟಿ ರೂ. ಮೌಲ್ಯದ ಪಬ್ ಹೊಂದಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮಾಡಿರುವ ಆರೋಪ ಆಧಾರ ರಹಿತವಾಗಿದೆ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್. ರಾಜೇಶ ತಿಳಿಸಿದರು.

ವಿಶ್ವನಾಥ್ ಅವರು ಇದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಧಾರರಹಿತ ಆರೋಪ ಮಾಡುವುದನ್ನು ಮುಂದುವರಿಸಿದರೆ ಅವರ ಕಚೇರಿ ಎದುರು ತಮಟೆ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ಎಸ್.ಎ.ರಹೀಂ, ಮರಿದೇವಯ್ಯ, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಶ್ರೀನಿವಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net