ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

CM Siddaramaiah 1
Published on

ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಕ್ಟೋಬರ್ 17 ಮತ್ತು 18 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

 ಅಕ್ಟೋಬರ್ 17 ರಂದು ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ಬೃಹತ್ ಉದ್ಯೋಗ ಮೇಳ-ಯುವ ಸಮೃದ್ಧಿ ಸಮ್ಮೇಳನ ಕಾರ್ಯಕ್ರಮವನ್ನು ಉದ್ಟಾಟಿಸುವರು.

 ಅಕ್ಟೋಬರ್ 18 ರಂದು ಬೆಳಗ್ಗೆ 11 ಗಂಟೆಗೆ ಹುಣಸೂರು ರಸ್ತೆಯಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯ ಮುಖ್ಯಮಂತ್ರಿ ಕಪ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೋಳುವರು. ಮಧ್ಯಾಹ್ನ 12 ಗಂಟೆಗೆ ನಂಜನಗೂಡು ತಾಲ್ಲೂಕಿನ ವರುಣಾ ಕೆಂಬಾಳು, ರಾಂಪುರ ಗ್ರಾಮ ಪಂಚಾಯಿತಿಯ ಕಬಿನಿ ನೀರು ಸರಬರಾಜು ಯೋಜನೆಯ 2ನೇ ಹಂತದ ಉನ್ನತೀಕರಿಸಿದ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 04 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ವಿಶ್ವಜ್ಞಾನಿ ಸಭಾಂಗಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಂಶೋದನಾ ವಿಸ್ತರಣಾ ಕೇಂದ್ರದ ರಜತ ಮಹೋತ್ಸವ ಹಾಗೂ ಜ್ಞಾನದರ್ಶನ ಕಟ್ಟಡ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net