ಮುಡಾ ಪ್ರಕರಣ ಸಿಬಿಐಗೆ ವಹಿಸಲಿ: ಯದುವೀರ್

Yaduveer-1
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕರಣ ಸಂಬಂಧ ಮುಕ್ತವಾಗಿ ತನಿಖೆ ಮಾಡಬೇಕಾಗಿದೆ. ಮುಖ್ಯವಾಗಿ ಪ್ರಕರಣದಲ್ಲಿ ಸಿಎಂ ಹೆಸರು ಕೇಳಿ ಬಂದಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಮೈಸೂರು - ಕೊಡಗು ಅಭಿವೃದ್ಧಿಗೆ ಈಗಾಗಲೇ ಕೊಡಗಿನಲ್ಲಿ ಸಭೆ ನಡೆಸಲಾಗಿದೆ. ಮೈಸೂರಿನಲ್ಲಿ ಹೊಸ ಜಿಲ್ಲಾಧಿಕಾರಿ ಬಂದಿದ್ದಾರೆ. ಹೀಗಾಗಿ ಅವರು ಸಭೆ ನಡೆಸಲು ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ. ಇದರ ಜತೆಗೆ ರೈಲ್ವೆ ಯೋಜನೆಗಳು ಹಾಗೂ ಏರ್‌ಪೋರ್ಟ್ ವಿಸ್ತೀರ್ಣದ ಬಗ್ಗೆ ಸಭೆ ನಡೆಸಲಾಗಿದೆ. ಇದರ ಜತೆಗೆ ಮೈಸೂರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ತರುವ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net