ಮುಡಾ ಪ್ರಕರಣದ ವಿಚಾರಣೆ ಮುಂದೂಡಿಕೆ

highcourt
Published on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಸಿಎಂ ಕುಟುಂಬದವರಿಗೆ ಬದಲಿ ನಿವೇಶನ ಹಂಚಿಕೆ ಹಗರಣದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.10ಕ್ಕೆ ಮುಂದೂಡಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭೂ ಮಾಲೀಕ ಜೆ.ದೇವರಾಜು ಪರ ವಕೀಲ ದುಷ್ಯಂತ್ ದವೆ ಹಾಜರಾಗಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಅರ್ಜಿ ವಿಚಾರಣೆ ಡಿ.5ಕ್ಕೆ ನಿಗದಿಯಾಗಿದೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆಯನ್ನು ಡಿ.5ರ ನಂತರ ನಿಗದಿಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.10ರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net