ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ವಿಚಾರಣೆ

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಸಂಬಂಧ ವಿಚಾರಣೆ
muda scam
Published on

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈ ಕೋರ್ಟ್‌ಗೆ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ.5 ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಮುಡಾ ಪ್ರಕರಣ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ. ಈ ತನಕ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಕೈಗೆತ್ತಿಕೊಂಡಿರುವುದು ಈಗ ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿದೆ.

‘ನನಗೆ ಮೊದಲಿನಿಂದಲೂ ಕೂಡ ಲೋಕಾಯುಕ್ತದ ಮೇಲೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾನು ಅರ್ಜಿ ಸಲ್ಲಿಸಿರುವೆ. ನ್ಯಾಯಾಲಯದಲ್ಲಿ ನಾಳೆ ಪ್ರಕರಣ ಬರಲಿದೆ. ವಾರದೊಳಗೆ ಸಿಬಿಐಗೆ ವಹಿಸಬಹುದು’ ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net