ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಗೆ ನೋಟಿಸ್

muda
Published on

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ತನಿಖಾಧಿಕಾರಿ ಟಿ.ಜೆ. ಉದೇಶ್ ನೋಟಿಸ್ ನೀಡಿದ್ದಾರೆ. ಶೀಘ್ರದಲ್ಲೇ ಅವರು ಮೈಸೂರಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಬರಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಬಿ.ಎಂ. ಪಾರ್ವತಿ ಅವರಿಗೆ 2021ರಲ್ಲಿ ವಿಜಯನಗರ ಸೇರಿದಂತೆ ನಗರದ ನಾನಾ ಬಡಾವಣೆಗಳಲ್ಲಿ 14 ಬದಲಿ ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ನಟೇಶ್ ಮುಡಾ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಲೋಕಾಯುಕ್ತ ಪೊಲೀಸರು ಮುಡಾದ ಪ್ರಭಾರ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಅಧಿಕಾರಿಯೊಬ್ಬರು ಸೇರಿದಂತೆ ಮುಡಾದ ಇಂಜಿನಿಯರ್, ಇತರೆ ಸಿಬ್ಬಂದಿಗಳನ್ನು ಈಗಾಗಲೇ ವಿಚಾರಣೆ ನಡೆಸಿದ್ದಾರೆ.

2010ರಿಂದ ಈಚೆಗೆ ಮುಡಾದ ಆಯುಕ್ತರು, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಲವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net