ಮುಡಾದಲ್ಲಿ ಆಡಳಿತಾತ್ಮಕ ಕಾರ್ಯಗಳು ಚುರುಕುಗೊಳ್ಳಬೇಕು

ಮುಡಾದಲ್ಲಿ ಆಡಳಿತಾತ್ಮಕ ಕಾರ್ಯಗಳು ಚುರುಕುಗೊಳ್ಳಬೇಕು
HC-Mahadevappa
Published on

ಮುಡಾದಲ್ಲಿ ಆಡಳಿತಾತ್ಮಕ ಕಾರ್ಯಗಳು ಚುರುಕುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಸಚಿವ ಡಾ.ಎಚ್.ಸಿ. ಮಹದೇವಪ್ಪ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಬುಧವಾರ ಮುಡಾ ಅಧಿಕಾರಿಗಳ ಸಭೆ ನಡೆಸಿದರು.

ಮುಡಾ ಹಗರಣದಿಂದ ಕಳೆದ ಎರಡು ತಿಂಗಳಿನಿಂದ ಯಾವುದೇ ಕೆಲಸ ಕಾರ್ಯ ನಡೆಯದೇ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಭಿವೃದ್ದಿ ಕಾರ್ಯ ಕುಂಠಿತಗೊಂಡಿದೆ. ಇದರೊಂದಿಗೆ ಸಾರ್ವಜನಿಕರು ಮುಡಾದಲ್ಲಿ ಯಾವುದೇ ಕಾರ್ಯ ನಡೆಯದೇ ಇರುವ ಬಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಮುಡಾ ಕಾರ್ಯ ಚುರುಕುಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮುಡಾ ವಿಚಾರದಲ್ಲಿ ಕೆಲವು ಕಾರ್ಯಗಳು ಮುಡಾದಲ್ಲಿ ಸ್ಥಗಿತಗೊಂಡಿವೆ.ಅವುಗಳನ್ನು ಶುರು ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಇನ್ನು ಆಡಳಿತ ಕಾರ್ಯಗಳು ಚುರುಕು ಗೊಳ್ಳಬೇಕು ಎಂದು ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಆಯುಕ್ತ ರಘು ನಂದನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net