

ನಗರದ ಜೆಎಲ್‌ಬಿ ರಸ್ತೆಯ ಮಹಾರಾಜ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸೋಮವಾರ ಮುಮ್ಮಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಲಾಯಿತು.
ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಬಿ.ಎಸ್.ಶ್ರೀಧರರಾಜೇ ಅರಸ್, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಆದಿತ್ಯ ಅಧಿಕಾರಿ ಆಸ್ಪತ್ರೆ ಮುಖ್ಯಸ್ಥ ಡಾ.ಚಂದ್ರಶೇಖರ್, ಪ್ರಾಂಶುಪಾಲ ಉದಯಶಂಕರ್ ಪುಷ್ಪಾರ್ಚನೆ ಮಾಡಿದರು. ಹಿರಿಯ ಉಪನ್ಯಾಸಕ ಎ.ಎಲ್. ಉಮೇಶ್ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಡಾ.ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.
ಎಂಟು, ಒಂಬತ್ತು ಹಾಗೂ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಿ.ಎಸ್.ಶ್ರೀಧರರಾಜೇ ಅರಸ್ ಅವರು ಪ್ರತಿಭಾವಂತರಿಗೆ ನಗದು ಬಹುಮಾನ ವಿತರಿಸಿದರು.