ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

prize
ಎನ್.ಆರ್.ಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು.
Published on

ಎನ್.ಆರ್.ಪುರ: ತಾಲೂಕಿನಲ್ಲಿ ಏರ್ಪಡಿಸಿದ್ದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಬಹುಮಾನ ಪಡೆದಿದ್ದಾರೆ ಎಂದು ಶಾಲೆಯ ಪ್ರಾಚಾರ್ಯರಾದ ಪೂರ್ಣಿಮಾ ತಿಳಿಸಿದ್ದಾರೆ.
ವೈಯಕ್ತಿಕ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿಗಳಾದ ಶ್ರೀಕಾಂತ್ ಎತ್ತರ ಜಿಗಿತ (ಪ್ರ), ಕೀರ್ತಿ 600 ಮೀ. ಓಟದಲ್ಲಿ (ಪ್ರ), ಸೃಜನ್ ಎತ್ತರ ಜಿಗಿತದಲ್ಲಿ (ತೃ), ತೇಜು ಉದ್ದ ಜಿಗಿತದಲ್ಲಿ (ತೃ) ಸ್ಥಾನ ಪಡೆದಿದ್ದಾರೆ. ಗುಂಪು ಆಟಗಳಲ್ಲಿ ಬಾಲಕರ ಖೋಖೋ (ಪ್ರ), ಬಾಲಕರ ಕಬಡ್ಡಿ (ಪ್ರ), ಬಾಲಕರ ವಾಲಿಬಾಲ್ (ದ್ವಿ), ಬಾಲಕಿಯರ ಖೋಖೋದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net