ಮೂರು ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

01
Published on

ಬೆಳಗಾವಿ: ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಾ.24 ರಂದು ಸಿಪಿಇಡಿ ಮೈದಾನದಲ್ಲಿ ಸಾಮೂಹಿಕವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ ತ್ವರಿತ ಕಾರ್ಯಕ್ರಮ ಏರ್ಪಾಡಾಗಿದ್ದು, 3 ಸಾವಿರ ಗರ್ಭಿಣಿಯರಿಗೆ ಸೀಮಂತ (ಉಡಿ ತುಂಬುವ) ಕಾರ್ಯಕ್ರಮ ನಡೆಯಲಿದೆ. ಅಂಗವಿಕಲರಿಗೆ ಸಾಧನ ಸಲಕರಣೆಗಳ ವಿತರಣೆ, ಬ್ರೈಲ್ ಲಿಪಿ, ಲ್ಯಾಪ್ ಟಾಪ್, ಬ್ರೈಲ್ ವಾಚ್, ಹೊಲಿಗೆ ಯಂತ್ರ ಹಾಗೂ ಸ್ಕೂಟರ್ ವಿತರಿಸಲಾಗುವುದು.

ಮಗು ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮ, ಭಾಗ್ಯಲಕ್ಷ್ಮಿ ಯೋಜನೆಯ ಸುಕನ್ಯಾ ಸಮೃದ್ಧಿ 5 ಫಲಾನುಭವಿಗಳಿಗೆ ಪಾಸ್ ಬುಕ್ ವಿತರಣೆ, ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಗೆ ಹಾಗೂ ಅತ್ಯುತ್ತಮ ಸ್ತ್ರೀ ಶಕ್ತಿ ಸಂಘದವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು. ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ಮಾ.24 ರಿಂದ ಮಾ.28ರ ವರೆಗೆ

5 ದಿನಗಳ ಕಾಲ ನಡೆಯಲಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net