ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Published on

 ಮೈಸೂರು: ಮೆಟ್ರಿಕ್ ನಂತರದ ಪಿಯುಸಿ ಮತ್ತು ಸಮಾನಂತರ (PUC & Equivalent Courses), ಸಾಮಾನ್ಯ ಪದವಿ (General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಿಗೆ (Integrated Degree Courses) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ” (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು https://ssp.postmatric.karnataka.gov.in/ ವೆಬ್‌ಸೈಟ್ ಮೂಲಕ ಸೆಪ್ಟೆಂಬರ್ 15 ರೊಳಗೆ ಸಲ್ಲಿಸಬೇಕು.

 ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬoಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್ ಅಥವಾ ಸಹಾಯವಾಣಿ ಸಂ: 8050770005, ಇಮೇಲ್ ವಿಳಾಸ  bcwdhelpline@gmail.com   ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾoಶದ ದೂ.ಸಂ: 1902, ಇಮೇಲ್ ವಿಳಾಸ postmatrichelp@karnataka.gov.in ನ್ನು ಸಂಪರ್ಕಿಸಬಹುದು ಎಂದು ನಂಜನಗೂಡಿನ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net