ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Application
Published on

ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ(ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳಿಗೆ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನಾಂಕವಾಗಿರುತ್ತದೆ.

 ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ, ವರ್ಗ ಹಾಗೂ ಇತರೆ ರೂ. 1.00 ಲಕ್ಷ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನ್ನು ಸಂಪರ್ಕಿಸಿ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

 ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬೆಸೈಟ್ https://bcwd.karnataka.gov.in/ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com  ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

 ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net