

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳಿಗೆ 2025-2026ನೇ ಸಾಲಿಗೆ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜಿಸಲು ಹಾಗೂ ಸದರಿ ಕಾರ್ಯಕ್ರಮದಡಿ ಪ್ರಯೋಜನ ಪಡೆಯಲು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಕಾಲೇಜು ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ವರ್ಗಗಳ https://twd.karnataka.gov.in ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಡಾ. ಬಾಬು ಜಗಜೀವನ್‌ರಾಮ್ ಭವನ, ಆದಿಪಂಪ ರಸ್ತೆ, ಒಂಟಿಕೊಪ್ಪಲು ಪೂರ್ವ ಬಡಾವಣೆ, ಪಡುವಾರಹಳ್ಳಿ, ಮೈಸೂರು ರವರಿಂದ ಪಡೆಯಬಹುದು ಹಾಗೂ ದೂರವಾಣಿ ಸಂಖ್ಯೆ: 08212427140/9591122826 ನ್ನು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವೆಬ್‌ಸೈಟ್:- https://twd.karnataka.gov.in ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಯೋಜನಾ ಸಮನ್ವಯಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.