ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Application
Published on

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಪಡೆಯಲು ಬಯಸುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ swdhmis.karnataka.gov.in  ರಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಅಂತಿಮ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ದೃಢೀಕೃತ ದಾಖಲೆಗಳನ್ನು ಆಯ್ಕೆ ಮಾಡಿರುವ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರುಗಳಿಗೆ ಸಲ್ಲಿಸತಕ್ಕದ್ದು.

 ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ, ಮೈಸೂರು ತಾಲ್ಲೂಕು ಡಾ|| ಬಾಬು ಜಗಜೀವನರಾಂ ಭವನ ಕಟ್ಟಡ, ಆದಿಪಂಪ ರಸ್ತೆ ಒಂಟಿ ಕೊಪ್ಪಲು ಪೂರ್ವ, ಬಡಾವಣೆ ಪಡುವಾರಹಳ್ಳಿ ಮೈಸೂರು-12, ದೂರವಾಣಿ ಸಂಖ್ಯೆ : 0821-2520910 ಯನ್ನು ಸಂಪರ್ಕಿಸಬಹುದು ಎಂದು ಮೈಸೂರು ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net