

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ, ವರ್ಗ ಹಾಗೂ ಇತರೆ ರೂ. 1.00 ಲಕ್ಷದೊಳಗಿರಬೇಕು. ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನ್ನು ಸಂಪರ್ಕಿಸಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದು ಎಂದು ಟಿ.ನರಸೀಪುರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.