

ಚಾಮರಾಜನಗರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಅವರು ಮೇ 1, 2 ಮತ್ತು 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮೇ 1ರಂದು ಸಂಜೆ 4 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸುವರು. ಬಳಿಕ ಗುಂಡ್ಲುಪೇಟೆಯ ಡಾ. ಬಾಬುಜಗಜೀವನ್ ರಾವ್ ಕಾಲೋನಿ ಮತ್ತು ಡುಂಗ್ರಿ ಗರಾಸಿಯ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಪಂಗಡದ ಅಲೆಮಾರಿ ಡುಂಗ್ರಿಗರಾಸಿಯ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸುವರು. ನಂತರ ಬಂಡೀಪುರದ ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಹೂಡುವರು.
ಮೇ 2ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಹಂದಿಜೋಗಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಮಾಡುವರು ಹಾಗೂ ಕುಂದು ಕೊರತೆಗಳನ್ನು ಆಲಿಸುವರು. ಮಧ್ಯಾಹ್ನ 12 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಕಮ್ಮಾರ ಕಾಲೋನಿಗೆ ಭೇಟಿ ನೀಡಿ ಕಮ್ಮಾರ ಸಮುದಾಯದ ಕುಂದು ಕೊರತೆಗಳನ್ನು ಆಲಿಸುವರು. ಮಧ್ಯಾಹ್ನ 1 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಸರಗೂರು ಗ್ರಾಮದ ದೊಂಬರ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಅಲೆಮಾರಿ ದೊಂಬರ ಸಮುದಾಯದ ಕುಂದು ಕೊರತೆಗಳನ್ನು ಆಲಿಸುವರು.
ಮಧ್ಯಾಹ್ನ 3 ಗಂಟೆಗೆ ಹನೂರು ತಾಲೂಕಿನಲ್ಲಿ ಕೊರಮ ಮತ್ತು ಕೊರಚ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಮಾಡುವರು ಹಾಗೂ ಕುಂದು ಕೊರತೆಗಳನ್ನು ಆಲಿಸುವರು. ಸಂಜೆ 6.30 ಗಂಟೆಗೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಸೋಲಿಗರ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಮಾಡುವರು ಹಾಗೂ ಕುಂದು ಕೊರತೆಗಳನ್ನು ಆಲಿಸಿ ಸಮಾಲೋಚನೆ ನಡೆಸುವರು. ನಂತರ ಬಿಳಿಗಿರಿರಂಗನಬೆಟ್ಟದ ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಹೂಡುವರು.
ಮೇ 3ರಂದು ಬೆಳಿಗ್ಗೆ 11 ಗಂಟೆಗೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾಮಾನ್ಯ ಜನರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.